ಬ್ರೇಕಿಂಗ್ ನ್ಯೂಸ್
30-11-21 07:19 pm HK Desk news ಕರ್ನಾಟಕ
ಬೆಂಗಳೂರು, ನ. 30: ಇಡೀ ಜಗತ್ತಿಗೆ ಕೊರೊನಾ ವೈರಸ್ ಮೂರನೇ ಅಲೆಯ ಆತಂಕ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ತಳಿ ಓಮಿಕ್ರಾನ್ ಆತಂಕ ಕೂಡ ಶುರುವಾಗಿದೆ. ಈ ವರೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಪ್ರಕರಣ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೂ ಕೋವಿಡ್ ರೂಪಾಂತರಿ ವೈರಸ್ ಆತಂಕ ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು ಎಂಬ ಊಹಾಪೋಹಗಳು ಎದುರಾಗಿವೆ.
ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಮಾಡಲಾಗುತ್ತಿದೆಯಾ? ಎಂಬುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.
"ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಇಲ್ಲ. ಈ ಕುರಿತಂತೆ ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು. ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
"ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ,' ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
No lockdown in Karnataka dont believe in wrong rumours stated CM Bommai during the questions asked me media today.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm