ಬ್ರೇಕಿಂಗ್ ನ್ಯೂಸ್
03-12-21 04:53 pm HK Desk news ಕರ್ನಾಟಕ
ಬೆಂಗಳೂರು, ಡಿ.3 : ‘ಪೊಲೀಸರು ಭ್ರಷ್ಟರಾಗಿದ್ದಾರೆ. ನಾಯಿಗಳಂತೆ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮದೇ ಇಲಾಖೆಯ ಆರಕ್ಷಕರನ್ನು ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಭೆ ನಡೆಸಿದ ವೇಳೆ ಗೃಹ ಸಚಿವರು ಉನ್ನತ ಪೊಲೀಸ್ ಅಧಿಕಾರಿಯೊಬ್ಬರ ಜತೆ ದೂರವಾಣಿ ಮೂಲಕ ಮಾತನಾಡುತ್ತಿದ್ದಾಗ ಈ ರೀತಿ ಬೈದಿದ್ದು ವಿಡಿಯೊದಲ್ಲಿ ದಾಖಲಾಗಿದೆ.
ಇಡೀ ಚಿಕ್ಕಮಗಳೂರು ಜಿಲ್ಲೆ ನಿಮ್ಮದು. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತಿದ್ದೇವೆ. ಯಾರಿಗೂ ಕಡಿಮೆ ಮಾಡಿಲ್ಲ. ಆದ್ರೆ ಇವರಿಗೆಲ್ಲ ಸಂಬಳದಲ್ಲಿ ಬದುಕಬೇಕೆಂದಿಲ್ಲ. ಇಂಥವರೆಲ್ಲ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ. ಯೋಗ್ಯತೆ ಇಲ್ಲದಿದ್ದರೆ ಸಮವಸ್ತ್ರ ಬಿಚ್ಚಿಟ್ಟು ಎಲ್ಲಾದರೂ ಹೋಗಿ ಸಾಯಲಿ ಅಥವಾ ಮಣ್ಣು ಹೊರಲಿ. ಇವರನ್ನೆಲ್ಲ ನಂಬಿಕೊಂಡು ಜನ ಬದುಕುವುದು ಹೇಗೆ? ಇಲ್ಲಿ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಿಂದ ಜಾನುವಾರುಗಳನ್ನು ಬಿಚ್ಚಿ ತೆಗೆದುಕೊಂಡು ಹೋಗುತ್ತಾರೆ. ಎಲ್ಲ ಪೊಲೀಸರು ಹಾಳಾಗಿ ಹೋಗಿದ್ದಾರೆ’ ಎಂದು ಸಚಿವರು ಹೇಳುತ್ತಿದ್ದಾರೆ.
ವಿಡಿಯೋ ವೈರಲ್ ಆದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ‘ಎಲ್ಲ ಪೊಲೀಸರನ್ನು ಉದ್ದೇಶಿಸಿ ಆ ರೀತಿಯ ಹೇಳಿಕೆ ನೀಡಿಲ್ಲ. ಅಕ್ರಮ ಗೋಸಾಗಾಟ ಮಾಡುವವರೊಂದಿಗೆ ಶಾಮೀಲಾದವರನ್ನು ಮಾತ್ರ ಉಲ್ಲೇಖಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.
‘ಗೃಹಸಚಿವನಾಗಿ ನಾನು ಪೊಲೀಸರನ್ನು ಗೌರವಿಸುತ್ತೇನೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ಚೆನ್ನಾಗಿದೆ. ಮೊನ್ನೆಯಷ್ಟೇ ನನ್ನ ಕ್ಷೇತ್ರದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಯತ್ನಿಸಿದವರ ಮೇಲೆ ಹಲ್ಲೆ ನಡೆದಿತ್ತು. ಆ ಹಿನ್ನೆಲೆಯಲ್ಲಿ ಕೆಲ ಪೊಲೀಸರನ್ನು ಉಲ್ಲೇಖಿಸಿ ಬೈದಿದ್ದೆ ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
Karnataka Home Minister Slams Police officers says they are like dogs eating corrupted money. After a meeting in Chikmagalur Home Minister talking to a higher officer on phone call went viral.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm