ಬ್ರೇಕಿಂಗ್ ನ್ಯೂಸ್
03-12-21 05:35 pm HK Desk news ಕರ್ನಾಟಕ
ಬೆಂಗಳೂರು, ಡಿ.3: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಭೀತಿಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆ, ಕಾಲೇಜು ಹೋಗುವ ಮಕ್ಕಳಿದ್ದರೆ ಅಂಥ ಮನೆಯವರು ಕಡ್ಡಾಯ ಎರಡು ಡೋಸ್ ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ.
ಅಲ್ಲದೆ, ಜನವರಿ 15 ರ ವರೆಗೆ ಶಾಲೆ, ಕಾಲೇಜುಗಳಲ್ಲಿ ಯಾವುದೇ ಸಭೆ, ಸಮಾರಂಭಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಮದುವೆ ಸಮಾರಂಭಗಳಲ್ಲಿ 500 ಜನರು ಮಾತ್ರವೇ ಪಾಲ್ಗೊಳ್ಳಲು ಆವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ.
ಕರ್ನಾಟಕದಲ್ಲಿ ಓಮಿಕ್ರಾನ್ ವೈರಸ್ ಸೋಂಕು ಪತ್ತೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಹಿರಿಯ ಸಚಿವರ ಜೊತೆಗೆ ತುರ್ತು ಸಭೆಯನ್ನು ನಡೆಸಲಾಗಿದ್ದು ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಸಭೆಯ ಬಳಿಕ ಸಚಿವ ಅಶೋಕ್, ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.


ಶಾಲೆ, ಕಾಲೇಜುಗಳಲ್ಲಿ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಶಾಲೆಯ ಆವರಣವನ್ನು ಪ್ರವೇಶಿಸಲು ಕಡ್ಡಾಯವಾಗಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿರಬೇಕು. ಇನ್ನು ಪೋಷಕರು ಎರಡು ಡೋಸ್ ಲಸಿಕೆ ಪಡೆದಿದ್ರೆ ಮಾತ್ರವೇ ಮಕ್ಕಳಿಗೆ ಶಾಲೆ, ಕಾಲೇಜುಗಳಿಗೆ ಪ್ರವೇಶ ನೀಡುವಂತೆ ಸೂಚಿಸಲಾಗಿದೆ. ಶಾಲೆಗಳಲ್ಲಿ ಯಾವುದೇ ಸಭೆ, ಸಮಾರಂಭ ಗಳನ್ನು ನಡೆಸುವಂತಿಲ್ಲ. ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್, ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು ಎಂದು ಆದೇಶಿಸಲಾಗಿದೆ.

ರಾಜ್ಯದಲ್ಲಿ ನಿತ್ಯವೂ ಒಂದು ಲಕ್ಷ ಟೆಸ್ಟ್‌ಗಳನ್ನು ಮಾಡಲು ನಿರ್ಧರಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅಕ್ಸಿಜನ್ ಬೆಡ್‌ಗಳನ್ನು ಹೆಚ್ಚಳ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮತ್ತೆ ಕಂಟ್ರೋಲ್ ರೂಮ್ ಆರಂಭಿಸಿ ಔಷಧಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಶೋಕ್ ತಿಳಿಸಿದ್ದಾರೆ.
ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು, ನೆಗೆಟಿವ್ ವರದಿ ಬಂದರೆ ಮಾತ್ರ ಮನೆಗೆ ಬಿಡಲಾಗುವುದು. ಒಂದು ವೇಳೆ ಕೋವಿಡ್ ದೃಢವಾದರೆ ಆಸ್ಪತ್ರೆಗೆ ಕಳುಹಿಸಲಾಗುವುದು. ಗುಣಮುಖರಾಗಿ ನೆಗೆಟಿವ್ ಬಂದ ಬಳಿಕವೇ ಮನೆಗೆ ಕಳುಹಿಸಲಾಗುವುದು. ವಿಮಾನ ನಿಲ್ದಾಣಗಳಲ್ಲಿ ತುರ್ತು ಆರ್‌ಟಿಪಿಸಿಆರ್ ಪರೀಕ್ಷೆಗೆ ರೂ. 3,000 ನಿಗದಿ ಮಾಡಲಾಗಿದೆ. 3 ರಿಂದ 4 ಗಂಟೆಯೊಳಗೆ ಫಲಿತಾಂಶ ಸಿಗುತ್ತದೆ. ಬೇರೆ ರಾಜ್ಯಗಳಲ್ಲಿ ಇದರ ಬೆಲೆ ₹4,000 ಕ್ಕೂ ಮೇಲಿದೆ.
ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲಾಗುವುದು. ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡು ಅಧಿವೇಶನ ನಡೆಸಲಾಗುವುದು ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.
Karnataka has introduced updated Covid-19 guidelines, based on recommendations by the technical advisory committee, after two cases of the new Omicron variant of coronavirus were detected in the state. According to the updated guidelines, all cultural activities/fests, functions have been postponed till January 15, 2022 in all educational institutions.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm