ಬ್ರೇಕಿಂಗ್ ನ್ಯೂಸ್
19-12-21 09:19 pm HK Desk news ಕರ್ನಾಟಕ
ಶಿವಮೊಗ್ಗ, ಡಿ.19: ಸಿಟಿ ರವಿ ಬಗ್ಗೆ ಕೋಟಿ ರವಿ ಎಂದು ಟೀಕಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಚಿವ ಕೆ.ಎಸ್. ಈಶ್ವರಪ್ಪ ಗರಂ ಆಗಿದ್ದಾರೆ. ಅವರ ಬಗ್ಗೆ ಏನು ಹೇಳಬೇಕೋ ಅರ್ಥವಾಗುತ್ತಿಲ್ಲ. ಸಿ.ಟಿ.ರವಿ ರಾಷ್ಟ್ರೀಯ ಪಕ್ಷದ ಪ್ರಧಾನ ಕಾರ್ಯದರ್ಶಿ. ಅವರ ಮೇಲೆ ಒಂದೂ ಕೇಸಿಲ್ಲ. ಡಿ.ಕೆ.ಶಿವಕುಮಾರ್ ಅವರಂತೆ ಸಿ.ಟಿ.ರವಿ ಏನೂ ತಿಹಾರ್ ಜೈಲಿಗೆ ಹೋಗಿ ಬಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಸಿಟಿ ರವಿಯ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಗೆ ಏನು ಅಧಿಕಾರವಿದೆ. ಸಿ.ಟಿ.ರವಿ ಲೂಟಿ ರವಿ ಎನ್ನುತ್ತೀರಲ್ಲಾ.. ತಿಹಾರ್ ಜೈಲಿಗೆ ಹೋಗಿ ಬಂದವರು ನೀವು. ನಿಮ್ಮ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು ಇಡೀ ರಾಜ್ಯದ ಜನರಿಗೇ ಗೊತ್ತಿದೆ. ಇದರ ಕೇಸು ಇನ್ನೂ ನಡೆಯುತ್ತಿದೆ. ಜಾಮೀನು ಮೇಲೆ ಡಿ.ಕೆ.ಶಿವಕುಮಾರ್ ಹೊರಗಡೆ ಇದ್ದಾರೆ. ಹೀಗಿದ್ದರೂ ಸಿ.ಟಿ.ರವಿಯನ್ನು ಲೂಟಿ ರವಿ ಎನ್ನುತ್ತಾರೆ. ಡಿ.ಕೆ.ಶಿವಕುಮಾರ್ ಕೂಡಲೇ ಸಿ.ಟಿ.ರವಿ ಹಾಗೂ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಈಶ್ವರಪ್ಪ ಆಗ್ರಹಿಸಿದರು.
ಬೆಳಗಾವಿ ಗಲಾಟೆಗೆ ಕನ್ನಡಿಗರೇ ಕಾರಣ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿಗೆ ಪತ್ರ ಬರೆದ ವಿಷಯಕ್ಕೆ ಖಾರವಾದ ಪ್ರತಿಕ್ರಿಯೆ ನೀಡಿರುವ ಸಚಿವ ಕೆ.ಎಸ್. ಈಶ್ವರಪ್ಪ , ಮಹಾರಾಷ್ಟ್ರ ಸಿಎಂ ಏನೂ ದೇವರಲ್ಲ. ಕಾಂಗ್ರೆಸ್ ನವರು ಈಗ ಉತ್ತರ ಕೊಡಬೇಕು. ಮಹಾರಾಷ್ಟ್ರದಲ್ಲಿರುವುದು ಶಿವಸೇನೆ ಹಾಗೂ ಕಾಂಗ್ರೆಸ್ ಸರ್ಕಾರ ಎಂದು ಹೇಳಿದ್ದಾರೆ.
ಗೂಂಡಾಗಿರಿಯನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ನಾವು ಯಾರ ಸುದ್ದಿಗೂ ಹೋಗುವುದಿಲ್ಲ. ನಮ್ಮ ಸುದ್ದಿಗೆ ಯಾರಾದರೂ ಬಂದರೆ ಸುಮ್ಮನೆ ಬಿಡುವುದಿಲ್ಲ. ಕರ್ನಾಟಕದ ನೆಲ, ಜಲ, ಭಾಷೆ ವಿಷಯಕ್ಕೆ ಎಲ್ಲ ಪಕ್ಷಗಳು ಒಂದಾಗಿಯೇ ಇರುತ್ತೇವೆ. ಗೂಂಡಾಗಿರಿ ಮಾಡಿದ್ದು, ಕನ್ನಡದ ಧ್ವಜ ಸುಟ್ಟಿದ್ದು, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿದ್ದು ಮರಾಠಿಗರೇ. ಇಂಥವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ, ಬಿಡುವುದೇ ಇಲ್ಲ. ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟಿರುವುದನ್ನು ಪ್ರಧಾನಮಂತ್ರಿಗೆ ತಿಳಿಸಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇವೆ ಎಂದು ಹೇಳಿದರು.
Eshwarappa slams DK Shivakumar for mocking CT Ravi. CT Ravi hasn't gone to Tihar Jail like DK Shivakumar he added.
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am