ಬ್ರೇಕಿಂಗ್ ನ್ಯೂಸ್
29-12-21 02:44 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ. 29: ವ್ಯಾಪಾರಸ್ಥರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಡಿ.31 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಅನ್ನು ಹಿಂಪಡೆಯಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ವಾಣಿಜ್ಯ ಚಟುವಟಿಕೆ ಸರಿಯಾಗಿ ನಡೆಯುತ್ತಿಲ್ಲ. ಅದನ್ನು ಗಮನದಲ್ಲಿಟ್ಟುಕೊಂಡು ಬಂದ್‌ಗೆ ಮುಂದಾಗಬಾರದು ಎಂದರು. ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಗೈಗೊಳ್ಳಲಾಗುವುದು ಎಂದರು. ಎಂಇಎಸ್ ನಿಷೇಧಿಸುವುದು ಒಂದೆರಡು ದಿನಗಳಲ್ಲಿ ಆಗುವುದಲ್ಲ. ಜನರೇ ಎಂಇಎಸ್ ತಿರಸ್ಕರಿಸಿದ್ದಾರೆ ಎಂದು ಹೇಳಿದರು
ಬಂದ್‌ಗೆ ಕರೆಗೆ ಯಾವುದೇ ಬದಲಾವಣೆ ಇಲ್ಲ; ವಾಟಾಳ್ ನಾಗರಾಜ್
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. ಬಂದ್ ಬೆಂಬಲಿಸುವಂತೆ ಜನರನ್ನು ಕೋರುವುದಕ್ಕಾಗಿ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಯಾವುದೇ ಕಾರಣಕ್ಕೂ ಬಂದ್‌ನಿಂದ ಹಿಂದೆ ಸರಿಯುವುದಿಲ್ಲ. ಅಂದು ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಲಾಗುವುದು. ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಜನರು ನಮ್ಮ ಉದ್ದೇಶವನ್ನು ಅರಿತು ಬಂದ್‌ಗೆ ಬೆಂಬಲ ಕೊಡಬೇಕು ಎಂದು ಕೋರಿದರು. ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅವರು ಹಾಗೂ 15 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.
Karnataka Bandh on 31st December Home Minister asks Kannada outfits to cancel, Vatal Nagaraj says no chance. Kannada organisations may have called for a ‘Karnataka Bandh’ on Dec 31, seeking a ban on Maharashtra Ekikaran Samithi (MES) over the recent statue flare-up, but it has left the state divided on the issue.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm