ಬ್ರೇಕಿಂಗ್ ನ್ಯೂಸ್
30-12-21 11:08 pm HK Desk news ಕರ್ನಾಟಕ
ಬೆಂಗಳೂರು, ಡಿ.30 : ಕಳೆದ ಮೂರು ವರ್ಷಗಳಲ್ಲಿ ರಾಜ್ಯದ 11 ಸಂಸದರು ಪ್ರಧಾನಿ ಮೋದಿ ಕನಸಿನ ‘ಸಂಸದರ ಆದರ್ಶ ಗ್ರಾಮ’ ಯೋಜನೆಗೆ ಎಳ್ಳುನೀರು ಬಿಟ್ಟಿದ್ದಾರೆ. 2019 ರಿಂದ ಈ ಯೋಜನೆಯಡಿ ಸಂಸದರು ತಮ್ಮ ಗ್ರಾಮಗಳನ್ನು ಆಯ್ಕೆ ಮಾಡಿಲ್ಲ.
ಪ್ರಧಾನಿ ನರೇಂದ್ರ ಮೋದಿ 2014ರ ಅ.11ರಂದು ಈ ಮಹತ್ವಾಕಾಂಕ್ಷೆಯ ಯೋಜನೆ ಜಾರಿಗೆ ತಂದಿದ್ದರು. ಗ್ರಾಮಗಳ ಸಮಗ್ರ ಅಭಿವೃದ್ಧಿಯ ಜತೆಗೆ ಸಂಸದರ ನಾಯಕತ್ವ ಮತ್ತು ಸಾಮರ್ಥ್ಯ ತೋರುವುದು ಯೋಜನೆಯ ಉದ್ದೇಶವಾಗಿತ್ತು. ತುಮಕೂರು ಸಂಸದ ಜಿ.ಎಸ್. ಬಸವರಾಜು ಮಾತ್ರ 2019–20 ಮತ್ತು 2020–21ರಲ್ಲಿ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ ಸಂಸದರು ಒಂದು ವರ್ಷ ಆಯ್ಕೆ ಮಾಡಿದ್ದರೆ ಆನಂತರ ಯೋಜನೆಯಿಂದ ದೂರ ಉಳಿದಿದ್ದಾರೆ.
ಚಿತ್ರದುರ್ಗ, ಧಾರವಾಡ, ಉತ್ತರ ಕನ್ನಡ, ಹಾಸನ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದರ್, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಹಾವೇರಿ, ಶಿವಮೊಗ್ಗ ಕ್ಷೇತ್ರದ ಸಂಸದರು ಕಳೆದ ಮೂರು ವರ್ಷಗಳಿಂದ ಆದರ್ಶ ಗ್ರಾಮ ಯೋಜನೆಯಡಿ ಗ್ರಾಮಗಳ ಆಯ್ಕೆಯನ್ನೇ ಮಾಡಿಲ್ಲ.
ಹಾಸನ ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರೇ ಇದ್ದಾರೆ. ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಪ್ರಲ್ಹಾದ ಜೋಶಿ, ಭಗವಂತ ಖೂಬಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕ್ಷೇತ್ರಗಳಲ್ಲಿಯೇ ಪ್ರಧಾನಿ ಮೋದಿ ಅವರ ಕನಸಿನ ಯೋಜನೆಗೆ ಎಳ್ಳುನೀರು ಬಿಡಲಾಗಿದೆ.
2019–20ನೇ ಸಾಲಿನಲ್ಲಿ ಬೆಳಗಾವಿ, ಬೆಂಗಳೂರು ಉತ್ತರ, ಚಿಕ್ಕೋಡಿ, ಕೊಪ್ಪಳ, ಕಲಬುರಗಿ, ತುಮಕೂರು, ದಾವಣಗೆರೆ, ಬಳ್ಳಾರಿ ಸಂಸದರು ಮಾತ್ರ ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 20 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. 2020–21ನೇ ಸಾಲಿನಲ್ಲಿ ಮಂಡ್ಯ, ಬಾಗಲಕೋಟೆ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ರಾಯಚೂರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರು ಯೋಜನೆಯನ್ನು ಕೈಚೆಲ್ಲಿದ್ದಾರೆ.
2021–22ನೇ ಸಾಲಿನಲ್ಲಿ ಮಂಡ್ಯ, ಬೆಳಗಾವಿ, ವಿಜಯಪುರ, ಉಡುಪಿ–ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಸಂಸದರು ಗ್ರಾಮಗಳನ್ನು ಆಯ್ಕೆ ಮಾಡಿದ್ದಾರೆ. ಉಳಿದ 21 ಸಂಸದರ ಕ್ಷೇತ್ರಗಳಲ್ಲಿ ಆಯ್ಕೆ ನಡೆದಿಲ್ಲ. ಈ ಮೂರು ವರ್ಷಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಒಟ್ಟು 25 ಗ್ರಾಮಗಳನ್ನು ಮಾತ್ರ ಯೋಜನೆಯಡಿ ಆಯ್ಕೆ ಮಾಡಿದ್ದಾರೆ.
MPs in Karnataka neglect sansad adarsh gram yojana even after selection of villages.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm