ಬ್ರೇಕಿಂಗ್ ನ್ಯೂಸ್
31-12-21 07:38 pm HK Desk news ಕರ್ನಾಟಕ
ಕಲಬುರ್ಗಿ, ಡಿ.31 : ರಾಜ್ಯದಲ್ಲಿ ಲವ್ ಜಿಹಾದ್, ಮತಾಂತರ ವಿರುದ್ಧ ಕಾನೂನು ಜಾರಿಗೆ ತರಲು ತಯಾರಿ ನಡೆಯುತ್ತಿದ್ದಂತೆ ಇಲ್ಲೊಬ್ಬರು ಸ್ವಾಮೀಜಿ ಲವ್ ಜಿಹಾದ್ ಮತ್ತು ಗೋಹತ್ಯೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದನ್ನೇ ನೆಪವಾಗಿಸಿ ಅವರ ಮಠಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಫ್ಜಲಪುರ ನಗರ ಮತ್ತು ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮಾಶಾಲ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಕೇದಾರ ಶ್ರೀ ಸ್ವಾಮೀಜಿ ಡಿ.28ರಂದು ಹಿಂದು ಜಾಗೃತಿ ಸೇನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಹತ್ಯೆ ಮತ್ತು ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗುರುವಾರ ರಾತ್ರಿ ಮಠದಲ್ಲಿ ಸ್ವಾಮೀಜಿ ನಿದ್ರಿಸುತ್ತಿದ್ದಾಗ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸ್ವಾಮೀಜಿ ಹೇಳಿಕೆಯಿಂದ ಕುಪಿತರಾಗಿರುವ ಗುಂಪು ಈ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
ಹಿಂದು ಜಾಗೃತಿ ಸೇನೆಯ ಪ್ರಮುಖರು ಕೃತ್ಯವನ್ನು ಖಂಡಿಸಿದ್ದು, ಕೇದಾರ ಸ್ವಾಮೀಜಿಗೆ ಭದ್ರತೆ ಹೆಚ್ಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಪೊಲೀಸರು ಅಫ್ಜಲಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
Police in Karnataka on Friday tightened security in Afjalpur town of Kalburgi district after miscreants pelted stones on the building of a religious mutt, whose seer had spoken against love jihad. The miscreants attacked the Mashala Siddalingeshwara Samsthan mutt's building on Thursday night when the seer, Kedar Sree Swamiji was sleeping inside, according to the police.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm