ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am