ಬ್ರೇಕಿಂಗ್ ನ್ಯೂಸ್
10-01-22 04:13 pm HK Desk news ಕರ್ನಾಟಕ
ಹಾಸನ, ಜನವರಿ 10: ಹಾಸನ ನಗರದ ಹರ್ಷಮಹಲ್ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಒಟ್ಟು 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ರ‌್ಯಾಂಡಮ್ ಟೆಸ್ಟ್ ಮಾಡಿದ್ದು, ಈ ವೇಳೆ 21 ವಿದ್ಯಾರ್ಥಿನಿಯರಿಗೆ ಪಾಸಿಟಿವ್ ದೃಢಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಟೆಸ್ಟ್ ಮಾಡಲು ಹಾಸನ ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.
23 ಪೊಲೀಸರಿಗೆ ಕೊರೊನಾ ಸೋಂಕು ದೃಢ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಓರ್ವ ಇನ್ಸ್‌ಪೆಕ್ಟರ್, ಓರ್ವ ಸಬ್ ಇನ್ಸ್‌ಪೆಕ್ಟರ್, 21 ಕಾನ್ಸ್‌ಟೆಬಲ್‌ಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಹಾಸನ ನಗರದಲ್ಲಿಯೇ ಅತಿ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಟ್ರಾಫಿಕ್ ಹಾಗೂ ಗ್ರಾಮಾಂತರ ಠಾಣೆ ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಶುಕ್ರವಾರ ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು. Random ಟೆಸ್ಟ್ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.
ಜನವರಿ 7 ಮತ್ತು 8, 9ರಂದು ಒಟ್ಟು 23 ಪೊಲೀಸರಿಗೆ ಕೊರೋನಾ ದೃಢಪಟ್ಟಿದೆ. ಸದ್ಯ ಎಲ್ಲರನ್ನೂ ಹೋಂ ಕ್ವಾರಂಟೈನ್ ಮಾಡಿದ್ದು, ಪೊಲೀಸ್ ಇಲಾಖೆ ಚಿಕಿತ್ಸೆ ಕೊಡಿಸುತ್ತಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರಿಗೂ ಇಂದು ಕೊವಿಡ್ ಟೆಸ್ಟ್ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಸ್ಫೋಟವಾಗುತ್ತಿದ್ದು, ಪ್ರತಿದಿನ ಕೊರೊನಾ ಸೋಂಕಿತರ ಸಂಖ್ಯೆ 100ರ ಗಡಿ ದಾಟಿದೆ. 23 ಪೊಲೀಸರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಹಾಸನ ಜಿಲ್ಲಾ ಜನರು ಆಂತಕಕ್ಕೀಡಾಗಿದ್ದಾರೆ.
ಹಾಸನ ಹಾಗೂ ಬೇಲೂರು, ಹೊಳೆನರಸೀಪುರ ತಾಲೂಕಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಹಾಸನ ತಾಲೂಕಿನಲ್ಲಿ 106 ಹಾಗೂ ಬೇಲೂರು 16, ಹೊಳೆನರಸೀಪುರ ತಾಲೂಕಿನಲ್ಲಿ 15 ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯ ಗ್ರಾಮೀಣ ಮಟ್ಟದಲ್ಲೇ ಸೋಂಕು ಹೆಚ್ಚಾಗುತ್ತಿರುವುದು ಗ್ರಾಮೀಣ ಭಾಗದ ಜನರನ್ನು ಮತ್ತಷ್ಟು ಕಂಗೆಡಿಸಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾರ್ವಜನಿಕಲ್ಲಿ ಕೊರೊನಾ ಆತಂಕ ಮತ್ತೆ ಶುರುವಾಗಿದೆ.
Covid spikes in Hassan, 21 police and 21 students tested positive for corona.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm