ಬ್ರೇಕಿಂಗ್ ನ್ಯೂಸ್
16-09-20 11:02 pm Headline Karnataka News Network ಕರ್ನಾಟಕ
ಕಲಬುರಗಿ, ಸೆಪ್ಟಂಬರ್ 16: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ನದಿ ನಾಲೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ಮಳೆ ಹಾನಿ ಪರಿಶೀಲನೆಗೆ ತೆರಳಿದ್ದ ತಹಶೀಲ್ದಾರ್ ಒಬ್ಬರು ಅಪಾಯದಲ್ಲಿ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. ಸೇತುವೆ ಮೇಲೆ ಹರಿಯುತ್ತಿದ್ದ ನದಿ ನೀರಿನಲ್ಲಿ ಕಾರು ಚಲಾಯಿಸಲೆತ್ನಿಸಿದ ತಹಶೀಲ್ದಾರ್ ಪಂಡಿತ್ ಬಿರಾದಾರ್ ಕಾರು ಕೊಚ್ಚಿ ಹೋಗಿದ್ದು ಆಪತ್ತಿಗೆ ಸಿಲುಕಿದ ತಹಸೀಲ್ದಾರ್ ಮರ ಹತ್ತಿ ಕುಳಿತಿದ್ದಾರೆ.
ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಣಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಸೇತುವೆ ದಾಟುತ್ತಿದ್ದ ವೇಳೆ ನೀರು ಹೆಚ್ಚಿದ್ದು ಅಪಾಯ ಎದುರಾಗಿತ್ತು. ಕಾರು ನೀರಿನಲ್ಲಿ ಮುಂದೆ ಚಲಿಸಲ್ಲ ಎಂದು ತಿಳಿದ ತಹಸೀಲ್ದಾರ್ ಮತ್ತು ಚಾಲಕ ಕಾರಿನಿಂದ ಇಳಿದು ನಡೆದುಕೊಂಡು ಹೋಗಿದ್ದಾರೆ. ಆದರೆ ಪ್ರವಾಹದ ನೀರಿನಲ್ಲಿ ಹೋಗಲು ಸಾಧ್ಯವಾಗದೆ ರಕ್ಷಣೆಗಾಗಿ ಅಲ್ಲಿಯೇ ಇದ್ದ ಮರ ಹತ್ತಿದ್ದಾರೆ. ಅಲ್ಲದೆ, ಮರದಿಂದಲೇ ರಕ್ಷಣೆಗಾಗಿ ಗೋಗರೆದಿದ್ದಾರೆ. ಪೋನ್ ಮುಖಾಂತರ ಇತರ ಅಧಿಕಾರಿಗಳನ್ನು ಸಂಪರ್ಕಿಸಿದ ಅವರು ‘ನಾನು ಪ್ರವಾಹದಲ್ಲಿ ಸಿಲುಕಿದ್ದೇನೆ. ಮರದ ಮೇಲಿದ್ದೇನೆ’ ಎಂದು ಹೇಳಿದ್ದಾರೆ.

ಅಪಾಯದಲ್ಲಿ ಸಿಲುಕಿರುವ ಅಧಿಕಾರಿಯ ರಕ್ಷಣೆಗೆ ಕೂಡಲೇ ಪೊಲೀಸರ ತಂಡ ಧಾವಿಸಿದೆ. ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಹಾಗೂ ಡಿವೈಎಸ್ಪಿ ವೀರಭದ್ರಯ್ಯ ಮತ್ತು ಸರ್ಕಲ್ ಇನಸ್ಪೆಕ್ಟರ್ ಮಹಾಂತೇಶ ಪಾಟೀಲ, ಮಿರಿಯಾಣ ಠಾಣೆಯ ಸಬ್ ಇನಸ್ಪೆಕ್ಟರ್ ಸಂತೋಷ ರಾಠೋಡ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ರಕ್ಷಣೆಗೆ ಧಾವಿಸಿದ್ದಾರೆ. ಕೊನೆಗೆ ಪ್ರವಾಹದ ನೀರಿನ ಮಧ್ಯೆ ಕಾರ್ಯಾಚರಣೆ ಯಶಸ್ವಿಯಾಗಿದ್ದು ಸಿಕ್ಕಿಬಿದ್ದ ತಹಸೀಲ್ದಾರ್ ಅವರನ್ನು ರಕ್ಷಣಾ ಸುರಕ್ಷಿತವಾಗಿ ಪಾರು ಮಾಡಿದೆ. ಮೂರು ಗಂಟೆಗಳ ಕಾರ್ಯಾಚರಣೆಯಲ್ಲಿ ಅಧಿಕಾರಿಯನ್ನು ರಕ್ಷಿಸಿ ಕರೆತಂದಿದ್ದು , ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm