ಬ್ರೇಕಿಂಗ್ ನ್ಯೂಸ್
17-09-20 10:48 am Headline Karnataka News Network ಕರ್ನಾಟಕ
ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. pic.twitter.com/jizYbVI8Bz
— B.S. Yediyurappa (@BSYBJP) September 17, 2020
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm