ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.


ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.


ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm