ಬ್ರೇಕಿಂಗ್ ನ್ಯೂಸ್
05-02-22 02:21 pm HK Desk news ಕರ್ನಾಟಕ
ಮೈಸೂರು, ಫೆ.5 : ಕರಾವಳಿ ಭಾಗದಲ್ಲಿ ಹಿಜಾಬ್ ವಿವಾದ ಕಿಡಿ ಹೊತ್ತಿಸಿರುವ ಹಿನ್ನೆಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ತನ್ವೀರ್ ಸೇಠ್, ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು ಪರಿಸ್ಥಿತಿ ಕೈಮೀರುವ ಮುನ್ನ ಎಚ್ಚತ್ತುಕೊಳ್ಳಿ ಎಂದು ಹೇಳಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ನಿರ್ಬಂಧ ವಿಧಿಸಿರುವ ಪ್ರಾಂಶುಪಾಲರ ನಡೆ ಆಕ್ಷೇಪಾರ್ಹ. ಇಸ್ಲಾಂನಲ್ಲಿ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು, ಸಿಖ್ ಸಮುದಾಯದಲ್ಲಿ ಪೇಟ ಧರಿಸುವುದು, ಕ್ರೈಸ್ತರಲ್ಲಿ ದೀಕ್ಷೆ ಪಡೆದು ಸ್ಕರ್ಟ್ ಧರಿಸುವುದು ಅನಾದಿ ಕಾಲದ ಸಂಪ್ರದಾಯ. ಇದಕ್ಕೆ ಇಲ್ಲಿಯವರೆಗೂ ಯಾವುದೇ ತಡೆ, ನಿಷೇಧ ಹೇರಿಲ್ಲ. ನಾನು ಶಿಕ್ಷಣ ಸಚಿವನಾಗಿದ್ದಾಗ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಸ್ಕರ್ಟ್ & ಶರ್ಟ್ ಸಮವಸ್ತ್ರದ ಬದಲಿಗೆ ಚೂಡಿದಾರ್ ಸಮವಸ್ತ್ರವನ್ನ ಜಾರಿಗೊಳಿಸಿದ್ದೆ.

ಪ್ರತಿಯೊಂದು ಧರ್ಮದಲ್ಲೂ ವಯಸ್ಸಿಗನುಗುಣವಾಗಿ ವಸ್ತ್ರ ಧರಿಸುವುದು ಸರ್ವೇ ಸಾಮಾನ್ಯ. ಹೆಣ್ಣು ಮಕ್ಕಳ ರಕ್ಷಣೆ ಮತ್ತು ಶಿಕ್ಷಣ ಸರ್ಕಾರದ ಕರ್ತವ್ಯ. ಉಡುಪಿ ಕಾಲೇಜಿನ ಪ್ರಾಂಶುಪಾಲರ ನಡೆ ಮಕ್ಕಳಲ್ಲಿ ಜಾತಿ ಭೇ಼ದ ಹುಟ್ಟು ಹಾಕುತ್ತಿದೆ. ಇದು ಆತಂಕಕಾರಿ, ಸಮಾಜಕ್ಕೆ ಮಾರಕ. ಪರಿಸ್ಥಿತಿ ಕೈ ಮೀರುವ ಮುನ್ನ ಸರ್ಕಾರ ಆ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ ವಿವಾದಕ್ಕೆ ತೆರೆ ಎಳೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ. ಹಿಜಾಬ್ ವಿವಾದ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆದು ಕಾಂಗ್ರೆಸ್ ಶಾಸಕ ತನ್ವೀರ್‌ಸೇಠ್ ಎಚ್ಚರಿಕೆ ನೀಡಿದ್ದಾರೆ.
Tanveer Sait writes letter to State Government to awake before things get worse on Hijab row in Karnataka.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm