ಬ್ರೇಕಿಂಗ್ ನ್ಯೂಸ್
18-09-20 11:02 am Headline Karnataka News Network ಕರ್ನಾಟಕ
ಕಲಬುರ್ಗಿ, ಸಪ್ಟೆಂಬರ್ 18: ತುಂಬಿಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಜೆಸ್ಕಾಂ ಎಂಜಿನಿಯರ್ ಒಬ್ಬರು ನೀರಿನಲ್ಲಿ ಕೊಚ್ಚಿ ಹೋದ ಘಟನೆ ಕಲಬುರ್ಗಿಯಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಜಿಲ್ಲೆಯ ಆಳಂದ ತಾಲ್ಲೂಕಿನ ವೈಜಾಪುರ–ಬಮ್ಮನಳ್ಳಿ ಗ್ರಾಮದ ಮಧ್ಯದಲ್ಲಿ ಭಾರಿ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳವನ್ನು ಕಾರಿನಲ್ಲಿ ದಾಟಲು ಅಫಜಲಪುರದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.
ಅವರೊಂದಿಗೇ ಕಾರಿನಲ್ಲಿದ್ದ ರಾಜಶೇಖರ ಬಸವರಾಜ ಕುಂಬಾರ ಎಂಬವರು ಈಜಿಕೊಂಡು ಪಾರಾಗಿದ್ದಾರೆ. ಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ನಡುವೆ ಅಳಂದ ಬಳಿಯ ಹಳ್ಳದಲ್ಲಿ ಸಿಲುಕಿದ್ದ ರಾಜಶೇಖರ ಅವರನ್ನು ಪೊಲೀಸರು ರಕ್ಷಿಸಿದ್ದಾರೆ. ಆದರೆ ಎಂಜಿನಿಯರ್ ಸಿದ್ದರಾಮ ದಾನಪ್ಪ ಅವಟೆ ಅವರ ಬಗ್ಗೆ ಈ ವರೆಗೆ ಸುಳಿವು ಸಿಕ್ಕಿಲ್ಲ.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm