ಬ್ರೇಕಿಂಗ್ ನ್ಯೂಸ್
08-02-22 03:21 pm HK Desk news ಕರ್ನಾಟಕ
ಶಿವಮೊಗ್ಗ, ಫೆ.8 : ಶಿವಮೊಗ್ಗ ನಗರದ ವಿವಿಧ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಹೊತ್ತಿಕೊಂಡಿದ್ದು ಅಹಿತಕರ ಘಟನೆಗಳಿಗೆ ಆಸ್ಪದ ನೀಡಿದೆ. ಕಾಲೇಜು ಆವರಣದಲ್ಲಿ ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಹಾಕಲಾಗಿದೆ.
ಶಿವಮೊಗ್ಗದಲ್ಲಿ ಹಿಜಾಬ್ - ಕೇಸರಿ ಶಾಲಿನ ವಿವಾದ ಬೇರೆಯದ್ದೇ ಆಯಾಮ ಪಡೆದುಕೊಳ್ಳುತ್ತಿದೆ. ವಿವಾದ ಈಗ ಕಲ್ಲು ತೂರಾಟದ ಹಂತಕ್ಕೆ ಬಂದಿದ್ದು ಕೋಮು ವೈಷಮ್ಯಕ್ಕೆ ಕಾರಣವಾಗಿದೆ. ಶಿವಮೊಗ್ಗದ ಬಾಪೂಜಿ ನಗರದ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಬ್ ಹಾಕಿಕೊಂಡು ಬಂದಿದ್ದು ಕಾಲೇಜಿಗೆ ಪ್ರವೇಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ, ಇದಕ್ಕೆ ಕಾಲೇಜಿನಲ್ಲಿ ಅವಕಾಶ ನೀಡಲಾಗಿಲ್ಲ. ಈ ನಡುವೆ, ವಿದ್ಯಾರ್ಥಿಗಳ ನಡುವೆ ಧರ್ಮಗಳ ಪರ ಘೋಷಣೆ ಕೇಳಲಾರಂಭಿಸಿದೆ. ಒಂದು ಕಡೆಯಿಂದ ಜೈಶ್ರೀರಾಮ್, ಇನ್ನೊಂದ್ಕಡೆಯಿಂದ ಜೈ ಹೋ ಅಕ್ಬರ್ ಘೋಷಣೆ ಕೇಳಿಬಂತು.


ಇದೇ ವೇಳೆಗೆ, ವಿದ್ಯಾರ್ಥಿಗಳ ಜೊತೆಗೆ ಅವರ ಕಡೆಯವರು ಕೂಡ ಕಾಲೇಜಿನ ಬಳಿ ಜಮಾಯಿಸಿದ್ದರು. ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ತಿಳಿಹೇಳುವ ಪ್ರಯತ್ನವನ್ನು ಮಾಡಿದ್ದರೂ ಕೆಲವು ಕಿಡಿಗೇಡಿಗಳು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದರು. ರಾಷ್ಟ್ರಧ್ವಜ ಹಾಕುವ ಧ್ವಜಸ್ತಂಭಕ್ಕೆ ಕೇಸರಿ ಧ್ವಜ ಕಟ್ಟಲು ಕೆಲವು ವಿದ್ಯಾರ್ಥಿಗಳು ಮುಂದಾದ ಸಂದರ್ಭದಲ್ಲಿ ಕಟ್ಟಡದ ಮೇಲೆ ನಿಂತಿದ್ದ ವಿದ್ಯಾರ್ಥಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ತಕ್ಷಣ ಮಧ್ಯಪ್ರವೇಶ ಮಾಡಿದ ಪೊಲೀಸರು ಲಾಠಿ ಬೀಸಿ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.


ಸಾಗರದ ಜ್ಯೂನಿಯರ್ ಕಾಲೇಜ್ ನಲ್ಲೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಜಾಬ್ ಹಾಗೂ ಕೇಸರಿ ಶಾಲಿನ ವಿಚಾರದಲ್ಲಿ ವಿದ್ಯಾರ್ಥಿಗಳು ಉದ್ವೇಗಕ್ಕೆ ಒಳಗಾಗಿರುವ ನಡುವೆಯೇ ಅವರ ಜೊತೆಗೆ ಕಾಲೇಜಿಗೆ ಬರುತ್ತಿರುವ ಇತರರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿ ಬಿಗಡಾಯಿಸುತ್ತಿದೆ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲೂ ವಿವಾದ ಮುಂದುವರಿದಿದ್ದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
As the controversy around wearing of Hijabs in educational institutions in Karnataka heats up, Chief Minister Basavaraj Bommai appealed for calm, asking all those concerned to ‘let children study’. He said the matter would be heard in the high court today, and for everyone to wait for the court’s observation on the matter.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm