ಬ್ರೇಕಿಂಗ್ ನ್ಯೂಸ್
14-02-22 09:11 pm HK Desk news ಕರ್ನಾಟಕ
ಶಿವಮೊಗ್ಗ, ಫೆ.14 : ಕಳೆದ ವಾರ ಕಲ್ಲು ತೂರಾಟ, ಹಿಂಸೆಗೆ ಕಾರಣವಾಗಿದ್ದ ಶಿವಮೊಗ್ಗ ನಗರದಲ್ಲಿ ಕೆಲವರು ಶಿಕ್ಷಣಕ್ಕಿಂತ ಹಿಜಾಬನ್ನೇ ದೊಡ್ಡದು ಮಾಡಿದ್ದಾರೆ. ಹೈಕೋರ್ಟ್ ಮಧ್ಯಂತರ ಆದೇಶದಂತೆ ಹಿಜಾಬ್ ಧರಿಸಲು ಅವಕಾಶ ಇಲ್ಲದ ಕಾರಣ ಇಲ್ಲಿನ ಪ್ರೌಢ ಶಾಲೆ ಒಂದರಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ತ್ಯಜಿಸಿ ಹೊರ ನಡೆದಿದ್ದು ಭಾರೀ ಸುದ್ದಿಗೆ ಗ್ರಾಸವಾಗಿದೆ.
ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಈ ಘಟನೆ ನಡೆದಿದೆ. ಶಾಲೆಯ 13 ಮಂದಿ ವಿದ್ಯಾರ್ಥಿನಿಯರು ಎಸ್ಸೆಸ್ಸೆಲ್ಸಿ ಪೂರ್ವಭಾವಿ ಪರೀಕ್ಷೆ ಬರೆಯದೆ ಹೊರ ನಡೆದಿದ್ದಾರೆ. ಎಂದಿನಂತೆ ಬೆಳಗ್ಗೆ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಗೆ ತೆರಳಿದ್ದ ವೇಳೆ ಹಿಜಾಬ್ ಧರಿಸದಂತೆ ಶಿಕ್ಷಕರು ಸೂಚಿಸಿದ್ದರಿಂದ ಕೊಠಡಿ ಹೊರಗೆ ತೆರಳಿದ್ದಾರೆ. ಈ ಪೈಕಿ ಇಬ್ಬರು ಎಂಟು ಮತ್ತು ಒಂಬತ್ತನೇ ತರಗತಿಯವರು. ಉಳಿದವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯರಾಗಿದ್ದಾರೆ.

ಶಾಲೆಗಿಂತ ಧರ್ಮವೇ ಮುಖ್ಯ ಎಂದ ವಿದ್ಯಾರ್ಥಿನಿಯರು !
ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಯಿಂದ ಹೊರ ಹೋಗಲು ಯತ್ನಿಸಿದಾಗ ಶಿಕ್ಷಕರು ಅವರ ಮನವೊಲಿಸಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯುವಂತೆ ಹೇಳಿದ್ದಾರೆ. ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡೇ ನಾವು ಬರೋದು. ಪರೀಕ್ಷೆ ಬರೆಯೋದಿಲ್ಲ. ನಮಗೆ ಧರ್ಮವೇ ಮುಖ್ಯ ಎಂದು ಹೇಳುತ್ತಾ ಹೊರ ನಡೆದಿದ್ದಾರೆ.
ನಮ್ಮ ಮಕ್ಕಳು ತಲೆಯ ಮೇಲೆ ಸ್ಕಾರ್ಫ್ ಕಟ್ಟಿಕೊಂಡಿದ್ದಾರೆ. ಅದನ್ನು ತೆಗೆಯುವಂತೆ ಶಿಕ್ಷಕರು ತಿಳಿಸಿದರು. ನಮಗೆ ಮೇಲಿಂದ ಆದೇಶವಿದೆ ಎಂದು ಹೇಳುತ್ತಿದ್ದಾರೆ. ಮಕ್ಕಳು ಮೊದಲಿಂದಲೂ ಸ್ಕಾರ್ಫ್ ಹಾಕ್ಕೊಂಡೇ ಶಾಲೆಗೆ ಬರುತ್ತಿದ್ದರು. ಈಗ ಅದಿಲ್ಲದೆ ಶಾಲೆ ಬೇಡ ಎನ್ನುತ್ತಿದ್ದಾರೆ. ಆದ್ದರಿಂದ ನಮ್ಮ ಮಕ್ಕಳನ್ನು ಕರೆದೊಯ್ಯುತ್ತಿದ್ದೇವೆ ಎಂದು ಪೋಷಕರೊಬ್ಬರು ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆಗಳ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಕಳೆದ ವಾರ ಶಿವಮೊಗ್ಗದ ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿತ್ತು. ಅದರ ಸಮೀಪದಲ್ಲೇ ಇರುವ ಬಿ.ಹೆಚ್. ರಸ್ತೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂದು ಪರೀಕ್ಷೆ ಬಿಟ್ಟು ತೆರಳಿದ್ದು ಹಿಜಾಬ್ ಪರವಾಗಿ ಮತ್ತೊಂದು ರೀತಿ ಪಟ್ಟು ಹಿಡಿದಿದ್ದಾರೆ.

ರಾಜ್ಯದ ಹಲವೆಡೆ ಹಿಜಾಬ್ ಹಗ್ಗಜಗ್ಗಾಟ
ರಾಜ್ಯದ ಹಲವು ಕಡೆ ಹಿಜಾಬ್ ತೆರವು ವಿಚಾರ ಭಾರೀ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದೆ. ಕೊಪ್ಪಳ, ಗುಲ್ಬರ್ಗದ ಉರ್ದು ಸರಕಾರಿ ಶಾಲೆಯಲ್ಲಿ ಹಿಜಾಬ್ ಹಾಕಿಯೇ ವಿದ್ಯಾರ್ಥಿನಿಯರು ತರಗತಿಯಲ್ಲಿ ಕುಳಿತಿದ್ದರು. ಈ ಬಗ್ಗೆ ಮಾಧ್ಯಮದಲ್ಲಿ ಬರುತ್ತಿದ್ದಂತೆ ಸ್ಥಳಕ್ಕೆ ಅಧಿಕಾರಿಗಳು ತೆರಳಿ ಹಿಜಾಬ್ ತೆರವು ಮಾಡಿದ್ದಾರೆ. ತರಗತಿ ಒಳಗೆ ಪಾಠ ಮಾಡುತ್ತಿದ್ದ ಶಿಕ್ಷಕಿಯೊಬ್ಬರ ಹಿಜಾಬನ್ನೂ ತೆರವುಗೊಳಿಸಿದರು. ಬಾಗಲಕೋಟ ಜಿಲ್ಲೆಯ ಶಾಲೆ ಒಂದರಲ್ಲಿ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ತಲೆಗೆ ಟೋಪಿ ಹಾಕ್ಕೊಂಡು ಬಂದು ಪರೀಕ್ಷೆ ಬರೆಯುತ್ತಿದ್ದರು. ಕ್ಯಾಮರಾ ಕಣ್ಣಿನಲ್ಲಿ ವಿಚಾರ ಮಾಧ್ಯಮದಲ್ಲಿ ವರದಿಯಾಗುತ್ತಿದ್ದಂತೆ ಶಿಕ್ಷಕರು ಟೋಪಿಯನ್ನು ತೆಗೆಸಿದರು. ಸಮವಸ್ತ್ರ ಬಿಟ್ಟು ಯಾವುದೇ ಧಾರ್ಮಿಕ ವಸ್ತ್ರಗಳನ್ನು ಧರಿಸಬಾರದು ಎಂದು ಮಧ್ಯಂತರ ಆದೇಶ ನೀಡಿದೆ.
Shivamogga even as the majority of Muslim students in Karnataka on Monday attended classes without wearing hijab as per the High Court's interim order, 13 students from the Government High School in Shivamogga district refused to take the SSLC (Class 10) preparatory examination after being asked to remove hijab.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm