ಬ್ರೇಕಿಂಗ್ ನ್ಯೂಸ್
17-02-22 09:53 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.17 : ರಾಜ್ಯದಲ್ಲಿ ಹಿಜಾಬ್ ವಿವಾದದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರವೂ ಹಲವೆಡೆ ಹಿಜಾಬ್ ಪರವಾಗಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದು ವಿದ್ಯಾರ್ಥಿನಿಯರ ಜೊತೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಕೂಡ ಹೋರಾಟಕ್ಕೆ ಕೈಜೋಡಿಸಿದ್ದಾರೆ.
ಶಿವಮೊಗ್ಗ ನಗರದ ಡಿವಿಎಸ್ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದರು. ಉಡುಪಿ ಎಂಜಿಎಂ ಕಾಲೇಜಿನಲ್ಲಿ ಇಂದು ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯಬೇಕಿದ್ದ ಪ್ರಾಕ್ಟಿಕಲ್ ಪರೀಕ್ಷೆಯನ್ನು ಹಿಜಾಬ್ ವಿವಾದದ ಹಿನ್ನೆಲೆ ಮುಂದೂಡಲಾಗಿದೆ.

ಬೆಳಗಾವಿಯ ವಿಜಯಾ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಕೆಲವು ಮುಸ್ಲಿಂ ಯುವಕರು ಕಾಲೇಜು ಬಳಿ ಜಮಾಯಿಸಿ ಪ್ರಾಚಾರ್ಯರ ವಿರುದ್ಧ ದಿಕ್ಕಾರ ಕೂಗಿದ್ದಾರೆ. ಅಲ್ಲದೆ, ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳ ಪೋಷಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಆರು ಮಂದಿ ಯುವಕರನ್ನ ವಶಕ್ಕೆ ಪಡೆದಿದ್ದಾರೆ. ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಈ ರೀತಿ ನಡೆದಿದ್ದು ಇದೇ ಮೊದಲು.
ವಿಜಯಪುರ ನಗರದಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಅನುಮತಿ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಇವರಿಗೆ ಇತರ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.

ದಾವಣಗೆರೆಯ ಎವಿಕೆ ಮಹಿಳಾ ಕಾಲೇಜಿನ 42, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 4 ವಿದ್ಯಾರ್ಥಿನಿಯರು, ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 12, ಹರಿಹರದಲ್ಲಿ 7 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ನಿರಾಕರಿಸಿ ತರಗತಿಗೆ ಹಾಜರಾಗದೆ ಮನೆಗೆ ತೆರಳಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಹೈಕೋರ್ಟ್ ಆದೇಶ ಧಿಕ್ಕರಿಸಿ ಹಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದರಿಂದ ಗೊಂದಲ ವಾತಾವರಣ ಉಂಟಾಗಿ ಪೊಲೀಸರು ಹಾಗೂ ಪಾಲಕರು, ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಸರಳಾ ದೇವಿ ಕಾಲೇಜಿನಲ್ಲಿ ಯುವಕನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದರು.
ಯಾದಗಿರಿ : ಸರ್ಕಾರಿ ಉರ್ದು ಶಾಲೆಯ ಮುಸ್ಲಿಂ ಮಕ್ಕಳು ತರಗತಿ ಬಹಿಷ್ಕರಿಸಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸ್ವಪ್ನ ಮೈದಾನದಲ್ಲಿರುವ ಪಿಯು ಕಾಲೇಜು ವಿದ್ಯಾರ್ಥಿಗಳೂ ತರಗತಿ ಬಹಿಷ್ಕಾರ ಮಾಡಿದರು. ಪ್ರತಿಭಟನೆಗೆ ಮುಂದಾಗಿದ್ದ ವಿದ್ಯಾರ್ಥಿನಿಯರ ಗುಂಪನ್ನು ಪೊಲೀಸರು ಚದುರಿಸಿದರು.
The tense situation continued in and around Karnataka colleges as the pre-university students wearing hijab demanded to be let inside classrooms. The hijab-clad students were sent back, and many protested the decision of college authorities. Some of them, who came in support of the hijab-wearing students near the Vijay Para-Medical College, were taken into custody in Belagavi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm