ಬ್ರೇಕಿಂಗ್ ನ್ಯೂಸ್
18-09-20 10:57 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 18: ದೆಹಲಿ ಪ್ರವಾಸದಲ್ಲಿರುವ ಸಿಎಂ ಯಡಿಯೂರಪ್ಪ ಕೊನೆಗೂ ಸಂಪುಟ ವಿಸ್ತರಣೆಗೆ ಪಕ್ಷದ ಹೈಕಮಾಂಡ್ ನಿಂದ ಅನುಮತಿ ಪಡೆದುಕೊಂಡಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿರುವ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಬಗ್ಗೆ ಮನವರಿಕೆ ಮಾಡಿದ್ದಾರೆ. ಖಾಲಿಯಿರುವ ಆರು ಸಚಿವ ಸ್ಥಾನಗಳ ಪೈಕಿ ಐದನ್ನು ಭರ್ತಿ ಮಾಡಲು ಒಪ್ಪಿಗೆ ಪಡೆದಿದ್ದಾರೆ. ಈ ಬಗ್ಗೆ ಐವರ ಹೆಸರಿನ ಲಿಸ್ಟ್ ಅನ್ನು ಕೂಡ ಹೈಕಮಾಂಡ್ ಬಳಿಗೆ ಒಯ್ದಿದ್ದರು ಎನ್ನಲಾಗ್ತಿದೆ. ಆದರೆ, ಐವರ ಪಟ್ಟಿಯಲ್ಲಿ ಮೂರು ಮಂದಿಯ ಹೆಸರನ್ನು ಮಾತ್ರ ಫೈನಲ್ ಮಾಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಳೆದ ಬಾರಿ ಸರಕಾರ ರಚನೆಗೆ ಕಾರಣವಾಗಿದ್ದ ಎಂ.ಟಿ.ಬಿ ನಾಗರಾಜ್, ಆರ್.ಶಂಕರ್ ಮತ್ತು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಬೆಳಗಾವಿ ಮೂಲದ ಉಮೇಶ್ ಕತ್ತಿ ಹೆಸರನ್ನು ಫೈನಲ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇನ್ನಿಬ್ಬರು ಸಚಿವ ಸ್ಥಾನಕ್ಕೇರುವ ಅದೃಷ್ಟವಂತರು ಯಾರು ಎನ್ನುವ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಅದು ಯಡಿಯೂರಪ್ಪ ಬಣ ಹೊರತುಪಡಿಸಿ ಇತರೇ ಪಕ್ಷ ನಿಷ್ಠರಿಗೆ ಒಲಿಯುವ ಸಾಧ್ಯತೆಯಿದೆ. ಇವರ ಹೆಸರನ್ನು ಸಿಎಂ ಹೊರತಾಗಿ ಹೈಕಮಾಂಡ್ ಸ್ವತಃ ಫೈನಲ್ ಮಾಡಲಿದೆ ಎನ್ನುವ ಮಾಹಿತಿ ಲಭಿಸಿದೆ.

ಇದೇ ವೇಳೆ, ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಪುನಾರಚನೆಗೆ ಒಲವು ಹೊಂದಿದ್ದಾರೆ ಎನ್ನಲಾಗುತ್ತಿದ್ದು ಅದಕ್ಕಾಗಿ ಆರು ಮಂದಿಯನ್ನು ಸಂಪುಟದಿಂದ ಹೊರಗಿಟ್ಟು ಆಕಾಂಕ್ಷಿಗಳಿಗೆ ಸ್ಥಾನ ಕಲ್ಪಿಸಲು ಮುಂದಾಗಿದ್ದಾರೆ. ಈ ವಿಚಾರವನ್ನೂ ಪಕ್ಷದ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದಾರೆ. ಅಲ್ಲದೆ, ವಿಧಾನಸಭೆ ಅಧಿವೇಶನಕ್ಕೂ ಮೊದಲೇ ಸಂಪುಟ ರಚನೆಗೆ ತಯಾರಿ ನಡೆಸಿದ್ದಾರೆ ಎನ್ನಲಾಗ್ತಿದೆ. ಹಾಗೊಂದು ವೇಳೆ ಆದರೆ ಭಾನುವಾರವೇ ಸಂಪುಟ ರಚನೆಯಾಗಲಿದೆ.


ಇನ್ನು ಆರು ಮಂದಿಯ ಬದಲಾವಣೆ ಜೊತೆಗೆ ಸಂಪುಟ ರಚನೆಯಾದರೆ ಉಡುಪಿಯಿಂದ ಸುನಿಲ್ ಕುಮಾರ್, ದಕ್ಷಿಣ ಕನ್ನಡದಲ್ಲಿ ಹಿರಿಯ ಶಾಸಕ ಎಸ್. ಅಂಗಾರಗೆ ಸಚಿವ ಸ್ಥಾನ ಸಿಗುವುದು ಖಚಿತ. ಬದಲಾವಣೆ ಇಲ್ಲದಿದ್ದರೂ ಐವರ ಸೇರ್ಪಡೆ ಆಗೋದಿದ್ದರೂ ಮೂವರು ಮೂಲ ಬಿಜೆಪಿಗರಿಗೇ ಸ್ಥಾನ ಸಿಗುವುದು ಪಕ್ಕಾ ಆಗಿದೆ. ಮೂಲ ಬಿಜೆಪಿಗರ ಪೈಕಿ ಉಡುಪಿ ಜಿಲ್ಲೆಯ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಥವಾ ಸುನಿಲ್ ಕುಮಾರ್ ಸಚಿವ ಸ್ಥಾನಕ್ಕೇರಲಿದ್ದಾರೆ ಎನ್ನಲಾಗ್ತಿದೆ. ಇದೇ ವೇಳೆ, ಡಿಸಿಎಂ ಸ್ಥಾನ ಬದಲಾಯಿಸಬೇಕೆಂಬ ಒತ್ತಡವೂ ಕೇಳಿಬಂದಿದೆ. ಶ್ರೀರಾಮುಲು ಮತ್ತು ರಮೇಶ ಜಾರಕಿಹೊಳಿ ಡಿಸಿಎಂ ಸ್ಥಾನಕ್ಕೆ ಕಣ್ಣಿಟ್ಟಿದ್ದಾರೆ. ಸಂಪುಟ ಪುನಾರಚನೆಯಾದರೆ ಡಿಸಿಎಂ ಸ್ಥಾನಗಳೂ ಬದಲಾಗುವುದು ನಿಶ್ಚಿತ ಎನ್ನಲಾಗುತ್ತಿದೆ. ಇದೇನಿದ್ದರೂ ಸಂಪುಟ ಫೈನಲ್ ಇನ್ನು ಎರಡೇ ದಿನದಲ್ಲಿ ಅಂತಿಮ ಆಗೋದಂತೂ ಪಕ್ಕಾ..
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm