ಬ್ರೇಕಿಂಗ್ ನ್ಯೂಸ್
21-09-20 05:30 pm Headline Karnataka News Network ಕರ್ನಾಟಕ
ಕಾಸರಗೋಡು, ಸೆ.21: ಜಿಲ್ಲೆಯಲ್ಲಿ ಕಳೆದ 2-3 ದಿನಗಳಿಂದ ಸುರಿದ ಅಬ್ಬರದ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ಮೃತಪಟ್ಟಿದ್ದಾರೆ.
ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ. ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಮಂಜೇಶ್ವರ ತಾಲೂಕಿನಲ್ಲಿ ಫೆಲಿಕ್ಸ್ ಡಿಸೋಜ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್ ಅಝೀಝ್ ಹಾಗೂ ಕುಂಬ್ಡಾಜೆ ಸಮೀಪದ ಉಬ್ರಂಗಳದ ಲಕ್ಷ್ಮೀನಾರಾಯಣ ಭಟ್ ಎಂಬವರ ಮನೆ ಮೇಲೆ ಮರ ಉರುಳಿ ನಷ್ಟ ಉಂಟಾಗಿದೆ. ವೆಳ್ಳರಿಕುಂಡು ಬಳಾಲ್ ಎಂಬಲ್ಲಿ 12 ಕುಟುಂಬ, ಕಳ್ಳಾರ್ ನಲ್ಲಿ ಮೂರು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.
ಮಧುವಾಹಿನಿ, ತೇಜಸ್ವಿನಿ ಹೊಳೆಗಳು ಉಕ್ಕಿ ಹರಿಯುತ್ತಿದೆ. ಪಿಲಿಕ್ಕೋಡು ನಲ್ಲಿ 60ರಷ್ಟು ಮನೆಗಳಿಗೆ ನೀರು ನುಗ್ಗಿದೆ. ಸೋಮವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದಿಷ್ಟು ಕಡಿಮೆಯಾಗಿದೆ.
ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬುಧವಾರ ತನಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Join our WhatsApp group for latest news updates
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm