ಬ್ರೇಕಿಂಗ್ ನ್ಯೂಸ್
15-03-22 09:17 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.15: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಕೆಯಾಗಿದೆ. ಉಡುಪಿ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ನಿಬಾ ನಾಝ್ ಹೆಸರಿನಲ್ಲಿ ಸುಪ್ರೀಂ ಕೋರ್ಟ್ ವಕೀಲ ಅನಾಸ್ ತನ್ವೀರ್ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಅಲ್ಲಿನ ತಳಮಟ್ಟದ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳುವಲ್ಲಿ ಸೋತಿದೆ. ಸಂವಿಧಾನದ ಮೂಲಭೂತ ಹಕ್ಕಾದ ಆರ್ಟಿಕಲ್ 25ರ ಉಲ್ಲೇಖಿತ ಧಾರ್ಮಿಕ ಹಕ್ಕನ್ನು ಉದ್ದೇಶಪೂರ್ವಕ ಕಡೆಗಣಿಸಿ ತೀರ್ಪು ನೀಡಲಾಗಿದೆ ಎಂದು ಮೇಲ್ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.

1983 ರ ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳ ನೀತಿಗಳು, 1995ರ ಕಾಯ್ದೆಯಡಿ ವಿದ್ಯಾರ್ಥಿಗಳಿಗೆ ಯಾವುದೇ ಸಮವಸ್ತ್ರ ಕಡ್ಡಾಯದ ಬಗ್ಗೆ ಉಲ್ಲೇಖ ಇಲ್ಲ. ಅಲ್ಲದೆ ಈ ನೀತಿಗಳು ಪ್ರಾಥಮಿಕ ಶಾಲೆಗಳಿಗೆ ಹೊರತು ಪಿಯು ಕಾಲೇಜುಗಳಿಗೆ ಅನ್ವಯ ಆಗಲ್ಲ. ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವುದಕ್ಮೆ ನಿರ್ದಿಷ್ಟ ಕಾನೂನು ಇಲ್ಲ. ಸಮವಸ್ತ್ರ ಧರಿಸದೇ ಇರುವವರಿಗೆ ಶಿಕ್ಷೆ ನೀಡಲು ಕಾನೂನು ಇಲ್ಲದ ಹೊರತು ಅದನ್ನು ಕಡ್ಡಾಯ ಪಡಿಸುವುದಕ್ಕೆ ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ಅರ್ಜಿಯಲ್ಲಿ ಪ್ರಶ್ನೆ ಮಾಡಲಾಗಿದೆ.
ಕಾಲೇಜು ಅಭಿವೃದ್ಧಿ ಸಮಿತಿ ರೂಪಿಸಲು ಶಿಕ್ಷಣ ಕಾಯ್ದೆಯಲ್ಲಿ ನಿರ್ದಿಷ್ಟ ಕಾನೂನು ಇಲ್ಲ. ಹಾಗಿದ್ದ ಮೇಲೆ ಸಮವಸ್ತ್ರ ನಿರ್ಧರಿಸುವುದಕ್ಕೆ ಅವುಗಳಿಗೆ ಅವಕಾಶ ಇರುವುದಿಲ್ಲ. ಹೀಗಾಗಿ ಫೆ.5 ರಂದು ರಾಜ್ಯ ಸರಕಾರ ಸಮವಸ್ತ್ರ ಕಡ್ಡಾಯ ಮಾಡಿ ಆದೇಶಿಸಿರುವುದು ಇಲ್ಲದ ಅಧಿಕಾರವನ್ನು ಬಳಸಿದಂತಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಅಲ್ಪಸಂಖ್ಯಾತರ ಹಕ್ಕು, ನಂಬಿಕೆಗಳನ್ನು ಮೊಟಕುಗೊಳಿಸುವ ಉದ್ದೇಶದಿಂದಲೇ ಈ ರೀತಿಯ ಆದೇಶ ಮಾಡಲಾಗಿತ್ತು. ಮಕ್ಕಳಿಗೆ ನಿಯಮ ಹೇರುವುದರ ಹೆತ್ತವರ ನಂಬಿಕೆಯನ್ನು ಹುಸಿಗೊಳಿಸುವ ಪ್ರಯತ್ನ ಇದರ ಹಿಂದಿದೆ ಎಂದು ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಗಮನ ಸೆಳೆಯಲಾಗಿದೆ.
The appeal has been filed against the Karnataka High Court order that held that the petitioners’ pleas against the hijab ban are ‘devoid of merit’ and so are not maintainable.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm