ಬ್ರೇಕಿಂಗ್ ನ್ಯೂಸ್
27-03-22 01:16 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.27: ಹೈಕೋರ್ಟ್ ತೀರ್ಪು ಹೊರತಾಗಿಯೂ ಕಾಲೇಜು ಶಿಕ್ಷಣದಿಂದ ದೂರ ಉಳಿದಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಶಿಕ್ಷಣ ಮತ್ತು ನಿಮ್ಮ ಭವಿಷ್ಯ ಮುಖ್ಯ. ಹಾಗಾಗಿ ಹಿಜಾಬ್ ವಿಚಾರದಲ್ಲಿ ನಿಮ್ಮ ಶಿಕ್ಷಣಕ್ಕೆ ಕುಂದು ತರುವ ಕೆಲಸ ಮಾಡಬೇಡಿ ಎಂದು ಸಲಹೆ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಎಂದು ರಾಜ್ಯ ಸರಕಾರ ಸುತ್ತೋಲೆ ಬಿಡುಗಡೆ ಮಾಡಿದ್ದರಿಂದ ಡಿಕೆಶಿ ಈ ಸಲಹೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಡಿಕೆಶಿ, ಶಾಲಾ ಶಿಕ್ಷಕರು ಕೂಡ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಕೂರಿಸಿ ಮನವೊಲಿಕೆ ಮಾಡಬೇಕು. ಹೈಕೋರ್ಟ್ ತೀರ್ಪು ನೀಡಿದರೂ, ಕೆಲವು ವಿದ್ಯಾರ್ಥಿನಿಯರು, ಪೋಷಕರು ತೀರ್ಪಿನ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಸದ್ಯಕ್ಕೆ ಈ ವಿಚಾರ ಸುಪ್ರೀಂ ಕೋರ್ಟಿನಲ್ಲಿದ್ದು, ಮುಂದೆ ಬೇರೆ ರೀತಿಯ ತೀರ್ಪು ಬರುವುದಕ್ಕೂ ಅವಕಾಶ ಇರುತ್ತದೆ. ಯಾವುದಕ್ಕೂ ಕಾಯಬೇಕಾಗುತ್ತದೆ. ಹಾಗೆಂದು ಹಿಜಾಬ್ ವಿಚಾರದಲ್ಲಿ ಒಂದೇ ವಿಚಾರಕ್ಕೆ ಅಂಟಿಕೊಂಡು ಕುಳಿತರೆ ತಮ್ಮ ಭವಿಷ್ಯವೇ ಹಾಳಾಗುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಸಮವಸ್ತ್ರದ ಬಣ್ಣದ ಶಾಲನ್ನೇ ತಲೆಗೆ ಹಾಕಿಕೊಂಡು ಬರಲಿ ಎಂಬ ಹೇಳಿಕೆಯ ಬಗ್ಗೆ ಕೇಳಿದ್ದಕ್ಕೆ, ಸಂವಿಧಾನ ಏನು ಹೇಳುತ್ತದೋ ಅದು ಎಲ್ಲರಿಗೂ ಅನ್ವಯ ಎಂದು ಹೇಳಿದರು. ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಭವಿಷ್ಯ ಹಾಳು ಮಾಡುವುದಕ್ಕಿಂತ ಕುಳಿತು ಸಮಸ್ಯೆ ಬಗೆಹರಿಸುವುದು ಒಳ್ಳೆಯದು. ಇದಕ್ಕಾಗಿ ಸರಕಾರ ನಡೆಸುವ ಮಂದಿ ವಿದ್ಯಾರ್ಥಿನಿಯರ ಮನವೊಲಿಸುವ ಕೆಲಸ ಮಾಡಬೇಕು. ಅಧಿಕಾರಿಗಳು, ಪೋಷಕರು, ಕಾಲೇಜು ಆಡಳಿತಗಳು ಪಟ್ಟು ಹಿಡಿದು ಕುಳಿತಿರುವ ವಿದ್ಯಾರ್ಥಿಗಳನ್ನು ಮನವೊಲಿಸಬೇಕು ಎಂದು ಹೇಳಿದರು.
Karnataka Congress President D.K. Shivakumar on Saturday urged parents and the BJP government in the state to convince the students about the court verdict on hijab to ensure that their careers are not ruined.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm