ಬ್ರೇಕಿಂಗ್ ನ್ಯೂಸ್
29-03-22 12:45 pm HK Desk news ಕರ್ನಾಟಕ
ಮಡಿಕೇರಿ, ಮಾ.29 : ಕಾಳು ಮೆಣಸು ಕೊಯ್ಯುತ್ತಿದ್ದಾಗ ಹುಲಿ ದಾಳಿ ನಡೆಸಿ ವ್ಯಕ್ತಿಯನ್ನು ಸೀಳಿ ಹಾಕಿದ ಘಟನೆ ವಿರಾಜಪೇಟೆ ತಾಲ್ಲೂಕಿನ ರುದ್ರಗುಪ್ಪೆ ಸಮೀಪದ ವಿ. ಬಾಡಗ ಗ್ರಾಮದಲ್ಲಿ ನಡೆದಿದ್ದು ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಿದೆ.
ಮೃತರನ್ನು ಗದ್ದೆಮನೆ ಗಣೇಶ್ (29) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಘಟನೆ ನಡೆದಿದ್ದು ಗ್ರಾಮಸ್ಥರು, ರೈತ ಸಂಘದ ಪ್ರತಿನಿಧಿಗಳು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶವ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಹುಲಿಯನ್ನು ಹಿಡಿಯಬೇಕು, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಭಾರೀ ಜನರು ಸೇರಿದ್ದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಜನರ ಆಕ್ರೋಶದ ಕಾರಣ ಇಂದು ಅರಣ್ಯ ಸಿಬಂದಿ ಸ್ಥಳದಲ್ಲಿ ಸೇರಿದ್ದು ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಎರಡು ಸಾಕಾನೆಗಳನ್ನು ಬಳಸಿ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಗೊಂಡಿದೆ. ಪಶು ವೈದ್ಯರು, ಅರಿವಳಿಕೆ ಮದ್ದು ನೀಡುವ ವೈದ್ಯರು ಸ್ಥಳಕ್ಕೆ ಬಂದಿದ್ದು ಹುಲಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮಸ್ಥರು ಹುಲಿಯನ್ನು ಕೊಲ್ಲಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ. ಮೃತ ಗಣೇಶ್ ಶವವನ್ನು ಇವತ್ತು ಕೂಡ ಸ್ಥಳದಲ್ಲಿ ಇರಿಸಿದ್ದು ಜನರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದ್ದಾರೆ.
Mangalore 29-year-old killed after tiger attack in Madikeri which he was in the fields. The deceased has been identified as Ganesh.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 09:45 pm
HK News Staffer
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm