ಬ್ರೇಕಿಂಗ್ ನ್ಯೂಸ್
03-04-22 10:54 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.3: ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಷ್ಟೇ ಸೀಮಿತವಾಗಿದ್ದ ವಿಧಾನ ಪರಿಷತ್ ಸಭಾಪತಿ, ಹಿರಿಯ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಕೊನೆಗೂ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುಂಬರುವ ಚುನಾವಣೆ ವೇಳೆಗೆ ಬಿಜೆಪಿ ಸೇರುವುದು ಬಹುತೇಕ ಖಚಿತ ಎಂದು ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈಗಾಗಲೇ ಚರ್ಚೆಗಳು ನಡೆದಿವೆ. ಬಹುತೇಕ ಮುಂದಿನ ದಿನಗಳಲ್ಲಿ ಬಿಜೆಪಿ ಸೇರುವುದು ಖಚಿತ. ಈಗ ಸಭಾಪತಿ ಸ್ಥಾನದಲ್ಲಿರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದಕ್ಕೆ ಆಗಲ್ಲ. ಮುಂದೆ ನಾನೇ ಈ ಬಗ್ಗೆ ತಿಳಿಸಲಿದ್ದೇನೆ ಎಂದು ತಿಳಿಸಿದರು.

ಬಿಜೆಪಿ ನಾಯಕರೊಂದಿಗೆ ಈ ಬಗ್ಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲು ಸಹಮತ ವ್ಯಕ್ತವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಮುಖ್ಯಮಂತ್ರಿ, ಕೇಂದ್ರ ಸಚಿವರು, ಮಾಜಿ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಸಹಮತ ತೋರಿದ್ದಾರೆ ಎಂದು ಹೊರಟ್ಟಿ ಹೇಳಿದರು.

ಯಾವಾಗ ಬಿಜೆಪಿ ಸೇರುತ್ತೀರಿ ಎಂಬ ಪ್ರಶ್ನೆಗೆ, ಬಹುತೇಕ ಮುಂದಿನ ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಸೇರ್ಪಡೆ ಪ್ರಕ್ರಿಯೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಈ ವಿಷಯವಾಗಿ ಚರ್ಚಿಸಿದ್ದೇನೆ. ಎಲ್ಲರ ಅನುಮತಿ ಪಡೆದು ಬಿಜೆಪಿ ಸೇರುತ್ತಿದ್ದೇನೆ ಎಂದರು. ಬಸವರಾಜ ಹೊರಟ್ಟಿ ಜನತಾ ಪರಿವಾರದ ಹಿರಿಯ ಮುಖಂಡರಾಗಿದ್ದು ಉತ್ತರ ಕರ್ನಾಟಕದಲ್ಲಿ ಇರುವ ಜೆಡಿಎಸ್ ಪಾಲಿನ ಏಕೈಕ ಲಿಂಗಾಯತ ಪ್ರಭಾವಿ ಮುಖಂಡ. ಇವರ ಬಿಜೆಪಿ ಸೇರ್ಪಡೆಯಿಂದ ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿಗೆ ಮತ್ತಷ್ಟು ಶಕ್ತಿ ಸಿಗಲಿದೆ. ಅಲ್ಲದೆ, ಪರಿಷತ್ ಸಭಾಪತಿ ಸ್ಥಾನವನ್ನೂ ಹೊರಟ್ಟಿ ಉಳಿಸಿಕೊಳ್ಳಲಿದ್ದಾರೆ.
The Vidhan Sabha Chairperson, senior JDS leader Basavaraja, who was limited to the rumor that the BJP will be joining the party, has finally made it clear. The BJP is almost certain to join the forthcoming elections, Basavaraja said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm