ಬ್ರೇಕಿಂಗ್ ನ್ಯೂಸ್
15-04-22 02:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.15: ಈಶ್ವರಪ್ಪ ಪ್ರಕರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ರಾಜ್ಯದ ಬಿಜೆಪಿ ಸರಕಾರ ಒಟ್ಟು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ಕೈತೊಳೆದುಕೊಳ್ಳಲು ಮುಂದಾಗಿದೆ. ಇದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಪೊಲೀಸ್ ವರಿಷ್ಠ ಪ್ರವೀಣ್ ಸೂದ್ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವುದರಿಂದ ಬಿಜೆಪಿ ರಾಷ್ಟ್ರ ಮಟ್ಟದಲ್ಲಿ ತೀವ್ರ ಇರಿಸು ಮುರಿಸಿಗೆ ಒಳಗಾಗಿದೆ. ಒಂದೆಡೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಈ ರೀತಿಯ ಬೆಳವಣಿಗೆ ಆಗಿರುವುದು ಮತ್ತು ಕಾಂಗ್ರೆಸ್ ಪಾಲಿಗೆ ಈ ಪ್ರಕರಣ ಅಸ್ತ್ರ ಕೊಟ್ಟಂತಾಗಿರುವುದು ಬಿಜೆಪಿ ನಾಯಕರು ಚಿಂತೆಗೆ ಒಳಗಾಗಿದ್ದಾರೆ. ಒಂದು ಹಂತಕ್ಕೆ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸುವ ಉದ್ದೇಶದಿಂದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ನೀಡಲು ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಪ್ರಕರಣವನ್ನು ಸಿಐಡಿಗೆ ಕೊಡುವ ವಿಚಾರದಲ್ಲಿ ಬಿಜೆಪಿ ನಾಯಕರ ಒಳಗೆ ಗಂಭೀರ ಚರ್ಚೆ ನಡೆದಿದ್ದು, ಡಿಜಿಪಿ ಪ್ರವೀಣ್ ಸೂದ್ ಜೊತೆ ಸಿಎಂ ಮಹತ್ವದ ಮಾತುಕತೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ವಿಸ್ತೃತ ಮಾಹಿತಿ ಪಡೆದ ಸಿಎಂ ಬೊಮ್ಮಾಯಿ, ಈಶ್ವರಪ್ಪ ಮೇಲಿನ ಕಮಿಷನ್ ಆರೋಪ, ಸಂತೋಷ್ ಆತ್ಮಹತ್ಯೆ ನಂತರ ಈಶ್ವರಪ್ಪ ವಿರುದ್ಧ ಆಗಿರುವ ಎಫ್ಐಆರ್, ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ಇತ್ಯಾದಿ ಪ್ರಕರಣಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನೆಪದಲ್ಲಿ ಸಿಐಡಿ ತಂಡಕ್ಕೆ ವಹಿಸಲಿದ್ದಾರೆ ಎನ್ನುವ ಮಾಹಿತಿಗಳಿವೆ.
ಈಶ್ವರಪ್ಪ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿ ಪಡೆದಿರುವ ಸಿಎಂ ಬೊಮ್ಮಾಯಿ, ಶೀಘ್ರವೇ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರಕ್ಕೆ ಬಂದಿದ್ದಾರೆ. ಆ ಮೂಲಕ ಸದ್ಯದ ಮಟ್ಟಿಗೆ ವಿಪಕ್ಷಗಳ ಬಾಯಿ ಮುಚ್ಚಿಸುವ ತಂತ್ರಗಾರಿಕೆ ನಡೆದಿದೆ. ಈಗಾಗಲೇ ಈಶ್ವರಪ್ಪ ಬಂಧನಕ್ಕೆ ಪಟ್ಟು ಹಿಡಿದಿರುವ ವಿಪಕ್ಷಗಳಿಗೆ, ಗುತ್ತಿಗೆದಾರರ ಆರೋಪ, ಆತ್ಮಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಸಲುವಾಗಿ ಸಿಐಡಿಗೆ ವಹಿಸಿದ್ದೇವೆ ಎಂದು ಸೂಕ್ತ ಪ್ರತ್ಯುತ್ತರ ಕೊಡಲು ಸಿಎಂ ಯೋಜನೆ ಹಾಕಿದ್ದಾರೆ.
"I am not under any pressure. There is nothing to do with the high command. It is all purely depending on preliminary investigation decision will be taken," said Karnataka Chief Minister Basavaraj Bommai.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm