ಬ್ರೇಕಿಂಗ್ ನ್ಯೂಸ್
03-05-22 01:15 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 3 : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯಲ್ಲಿ 4,000 ಕೆ.ಜಿ. ತೂಕದ ಖಡ್ಗ ಪ್ರಮುಖ ಆಕರ್ಷಣೆಯಾಗಲಿದ್ದು ಖಡ್ಗವನ್ನು ದೆಹಲಿಯ ನೋಯ್ಡಾದಲ್ಲಿ ತಯಾರಿಸಿ ಬೆಂಗಳೂರಿಗೆ ತರಲಾಗಿದೆ.
ಸೋಮವಾರ ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಎನ್. ಅಶ್ವತ್ಥ ನಾರಾಯಣ ಬರಮಾಡಿಕೊಂಡರು. ಈ ವೇಳೆ ಸಚಿವರ ನೇತೃತ್ವದಲ್ಲಿ ಪುರೋಹಿತರು ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆ ಎತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯ್ಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತಾರ್ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು.
ಕೆಂಪೇಗೌಡರ ಕೈಯಲ್ಲಿ 4000 ಕೆಜಿ ತೂಕದ ಖಡ್ಗ !

ರಾಜಧಾನಿ ಬೆಂಗಳೂರು ತಲುಪಿದ ಕೆಂಪೇಗೌಡರ ಪ್ರತಿಮೆಯ 4000 ಕೆಜಿ ತೂಕದ ಖಡ್ಗಕ್ಕೆ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶಕ್ತಿಪೂಜೆಯನ್ನು ನೆರವೇರಿಸಿದರು. "ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಖಡ್ಗವು ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಲಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಆಗಮಿಸುವ ಪ್ರತಿಯೊಬ್ಬರು ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟದಿಂದ ಒಂದು ದಿವ್ಯ ಅನುಭೂತಿಯನ್ನು ಪಡೆದುಕೊಳ್ಳುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ," ಎಂದು ಸಚಿವ ಅಶ್ವತ್ಥ ನಾರಾಯಣ ಬಣ್ಣಿಸಿದರು.
ಈ ಸಂದರ್ಭದಲ್ಲಿ ಅಮೆರಿಕದ ಅಕ್ಕ' ಕನ್ನಡ ಕೂಟಗಳ ಮುಖ್ಯಸ್ಥ ಡಾ. ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು.
The 4,000-foot tall bronze statue of Kempegowder, a 108-foot tall statue, will be installed at Kempegowda International Airport near Devanahalli. The weight sword has reached Bangalore from Delhi.The sword, which came in a special truck, was handed over to Higher Education Minister Dr. C.N. Ashwaththa Narayana arrived on Monday. On this occasion, the priests, led by the minister, performed the traditional Shakti pooja for the sword. He also congratulated all the workers who were actively involved in the work.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm