ಬ್ರೇಕಿಂಗ್ ನ್ಯೂಸ್
10-05-22 05:47 pm HK Desk News ಕರ್ನಾಟಕ
ಸಕಲೇಶಪುರ, ಮೇ 10: ಸಕಲೇಶಪುರ ತಾಲೂಕಿನ ಗಾಳಿಗುಡ್ಡ ಗ್ರಾಮದ ದಿವಾನ್ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಹಿಂಡು ದಾಳಿ ನಡೆಸಿದ್ದು ಕೂಲಿ ಕಾರ್ಮಿಕ ಬಲಿಯಾಗಿದ್ದಾನೆ.
ಕೆಂಪನಾಲೆ ಗ್ರಾಮದ ರವಿ(40) ಮೃತ ಕಾರ್ಮಿಕ. ಎಸ್ಟೇಟ್‌ನಲ್ಲಿ 20 ಜನ ಕಾರ್ಮಿಕರು ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ವೇಳೆ 20ಕ್ಕೂ ಹೆಚ್ಚಿದ್ದ ಕಾಡಾನೆಗಳ ಹಿಂಡು ನುಗ್ಗಿ ಬಂದಿದೆ. ಈ ವೇಳೆ, ಒಂದು ಆನೆ ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ಅಲ್ಲಿದ್ದ ಕಾರ್ಮಿಕರು ದಿಕ್ಕಪಾಲಾಗಿ ಓಡಿದ್ದು ತಪ್ಪಿಸಿಕೊಳ್ಳಲು ಸಾಧ್ಯವಾಗದ ರವಿ ಎಂಬಾತ ನೆಲಕ್ಕೆ ಬಿದ್ದಿದ್ದು ಆತನ ಮೇಲೆ ಆನೆ ಕಾಲಿಟ್ಟು ತುಳಿದು ಹತ್ಯೆ ಮಾಡಿದೆ.

ಬೆಳಗೋಡು ಹೋಬಳಿಯ ಸುತ್ತಮುತ್ತಲಿನ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಆಗಮಿಸಿ ಕಾಡಾನೆ ಸಮಸ್ಯೆ ಪರಿಹರಿಸದ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೂ ಇದೇ ಪರಿಸರದ ಕಡೆಗರ್ಜೆ ಎಂಬ ಗ್ರಾಮದಲ್ಲಿ ಇಬ್ಬರು ಕಾರ್ಮಿಕರು ಕಾಡಾನೆ ತುಳಿತಕ್ಕೆ ಬಲಿಯಾಗಿದ್ದರು.

ಸ್ಥಳಿಯರು ಮೃತದೇಹ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದು ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಧಿಕಾರಿಗಳು ಕುಟುಂಬಸ್ಥರನ್ನು ಮನವೊಲಿಸಿ ಪ್ರತಿಭಟನೆ ಹಿಂದೆ ಪಡೆಯುವಂತೆ ಮಾಡಿದ್ದಾರೆ.
Wild elephant kills elderly man at Estate at Sakleshpura.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
19-10-26 12:40 am
HK News Staffer
Mangalore Crime, Bantwal Stabbing: ಬಂಟ್ವಾಳ ;...
18-10-26 09:45 pm
Kokkada Fight, Mangalore: ಕೊಕ್ಕಡ ; ಹೂವಿನ ವ್ಯಾ...
18-10-26 09:32 pm
Fr Cyprian Pinto Arrest, POCSO: ಬಾಲಕರಿಗೆ ಲೈಂಗ...
18-10-26 10:36 am
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am