ಬ್ರೇಕಿಂಗ್ ನ್ಯೂಸ್
10-05-22 10:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಸ್ಥಾನಕ್ಕೆ ಇತ್ತೀಚೆಗೆ ವರ್ಗಾವಣೆಗೊಂಡಿದ್ದ ಡಾ.ಪಿ.ರವೀಂದ್ರನಾಥ್ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ನಿರ್ದೇಶಕ ಸ್ಥಾನದಿಂದ ಇತ್ತೀಚೆಗೆ ಪೊಲೀಸ್ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದರಿಂದ ಬೇಸರಗೊಂಡು ರಾಜಿನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಕೆಲವು ದಿನಗಳಿಂದ ಕುಟುಂಬದ ಕಾರ್ಯಕ್ರಮ ಹಿನ್ನೆಲೆಯಲ್ಲಿ ರವೀಂದ್ರನಾಥ್ ರಜೆಯ ಮೇಲೆ ತೆರಳಿದ್ದರು. ಇದೇ ಅವಧಿಯಲ್ಲಿ ಅವರನ್ನು ಬೇರೊಂದು ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ರಜೆ ಕಳೆದು ಮಂಗಳವಾರ ಸೇವೆಗೆ ಹಾಜರಾಗಿದ್ದು ಕೆಲ ಹೊತ್ತು ಕಚೇರಿಯಲ್ಲಿದ್ದು ವಿಧಾನಸೌಧಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ರವೀಂದ್ರನಾಥ್ ಅವರು 2013- 14 ರಲ್ಲಿಯೂ ಒಮ್ಮೆ ಪೊಲೀಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು. ಕನ್ನಿಂಗ್ ಹ್ಯಾಂ ರಸ್ತೆಯ ಕಾಫಿ ಸೆಂಟರ್ ನಲ್ಲಿ ನಡೆದ ಫೋಟೋಶೂಟ್ ವಿವಾದ ಸಂಬಂಧ ಅವರನ್ನು ಹೈಗ್ರೌಂಡ್ಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು. ಮತ್ತು ಅಂದಿನ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಹಾಗೂ ಅಂದಿನ ಗುಪ್ತದಳ ಐಜಿಪಿ ಐಎನ್ ಎಸ್ ಪ್ರಸಾದ್ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದ ರವೀಂದ್ರನಾಥ್ ಅದೇ ಸಿಟ್ಟಿನಲ್ಲಿ ತಮ್ಮ ಸೇವೆಗೆ ರಾಜೀನಾಮೆ ಸಲ್ಲಿಸಿದ್ದರು. ಅದಲ್ಲದೆ, ಸಿಎಂ ಕಚೇರಿಯಿಂದ ತಮ್ಮ ನಿವಾಸದ ವರೆಗೆ ಪಾದಯಾತ್ರೆ ನಡೆಸಿ ಹಂಗಾಮ ಸೃಷ್ಟಿಸಿದ್ದರು. ಆನಂತರ ದಲಿತ ಸಂಘಟನೆಗಳು ಮಧ್ಯಸ್ಥಿಕೆ ವಹಿಸಿ ಮನವೊಲಿಸಿದ್ದರಿಂದ ರಾಜಿನಾಮೆ ವಾಪಾಸ್ ಪಡೆದಿದ್ದರು. ಅದಾದ ಬಳಿಕ ಅವರಿಗೆ ಯಾವುದೇ ಮಹತ್ವದ ಹುದ್ದೆ ಲಭಿಸಿರಲಿಲ್ಲ.
Expressing displeasure over his recent transfer to the training wing of the Karnataka state police, Director General of Police (DGP) Dr P Ravindranath on Monday said he will tender his resignation on Tuesday.After handing over charge to Addl DGP Arun Chakravarthy at Directorate of Civil Rights Enforcement (DCRE), Ravindranath walked from his office on Palace Road to the office of the state police chief on Nrupathunga Road to meet state police chief Praveen Sood.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm