ಬ್ರೇಕಿಂಗ್ ನ್ಯೂಸ್
15-05-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15 : ರಾಜ್ಯಸಭೆಗೆ ಕರ್ನಾಟಕದಿಂದ ಪ್ರಿಯಾಂಕ ಗಾಂಧಿ ಅವರನ್ನು ಅಭ್ಯರ್ಥಿಯಾಗಿಸಲು ರಾಜ್ಯ ಕಾಂಗ್ರೆಸಿನ ಕೆಲವು ನಾಯಕರು ಒಲವು ತೋರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿದಂತೆ ಆ ಬಣದ ನಾಯಕರು ಪ್ರಿಯಾಂಕಾರನ್ನು ಕರ್ನಾಟಕದಿಂದ ಆಯ್ಕೆ ಮಾಡಿ ಮುಂದಿನ ಚುನಾವಣೆಗೆ ತಯಾರಿ ನಡೆಸಲು ಮುಂದಾಗಿದ್ದಾರೆ.
ಆದರೆ, ಪ್ರಿಯಾಂಕಾ ಗಾಂಧಿ ಹೆಸರು 2020ರಿಂದಲೂ ಪ್ರತಿ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿಯೂ ಕೇಳಿಬರುತ್ತಿದೆ. ಭವಿಷ್ಯದ ನಾಯಕಿ ಎಂದು ಗುರುತಿಸಲ್ಪಟ್ಟಿರುವ ಪ್ರಿಯಾಂಕಾ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಲು ರಾಜ್ಯಸಭಾ ಚುನಾವಣೆ ಬದಲು ಲೋಕಸಭೆ ಸ್ಪರ್ಧಿಸುವ ಸಾಧ್ಯತೆ ಹೆಚ್ಚು. ಹಾಗಾಗಿ, ಹಾಲಿ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ಬೇರೆ ರಾಜ್ಯದಿಂದ ಸ್ಪರ್ಧಿಸಲು ಬಯಸಿದರೆ, ರಾಜ್ಯದಿಂದ ಬೇರೊಬ್ಬ ಅಚ್ಚರಿಯ ಅಭ್ಯರ್ಥಿಯನ್ನು ಪಕ್ಷ ಕಳಿಸಿಕೊಡಲಿದೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.


ಇದೇ ವೇಳೆ, ಮಾಜಿ ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮತ್ತು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಕೂಡ ರಾಜ್ಯಸಭೆ ಸ್ಥಾನಕ್ಕೆ ಲಾಬಿ ಮಾಡುತ್ತಿದ್ದಾರೆ. ಉಡುಪಿ ಮೂಲದ ಆಸ್ಕರ್ ಫೆರ್ನಾಂಡಿಸ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ತಮ್ಮದೇ ಸಮುದಾಯದ ಮುಖಂಡರನ್ನು ಸದಸ್ಯರನ್ನಾಗಿ ಮಾಡುವಂತೆ ಕೆಲವು ಕ್ರಿಶ್ಚಿಯನ್ ಮುಖಂಡರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ. ಹಾಗಾಗಿ, ಆಸ್ಕರ್ ಅವರ ರಾಜ್ಯಸಭೆ ಸ್ಥಾನವೂ ಜೂನ್ 30 ರಂದು ತೆರವಾಗಲಿದ್ದು ಅದನ್ನು ತುಂಬಲು ಮತ್ತೊಬ್ಬ ಕ್ರಿಸ್ತಿಯನ್ ಮುಖಂಡರನ್ನು ಕಣಕ್ಕಿಳಿಸಬೇಕೆಂಬ ಒತ್ತಡ ಸಿದ್ದರಾಮಯ್ಯ ಮತ್ತು ಅವರ ಬಣದ್ದಿದೆ. ಸಿದ್ದು ಬಣದ ಒತ್ತಾಯ ವರ್ಕೌಟ್ ಆದಲ್ಲಿ ಹಿಂದುಳಿದ ವರ್ಗದ ಉಗ್ರಪ್ಪ ಅಥವಾ ಕ್ರಿಸ್ತಿಯನ್ ಸಮುದಾಯದ ಐವಾನ್ ಡಿಸೋಜ ರಾಜ್ಯಸಭೆ ಪಡೆದರೆ ಅಚ್ಚರಿಯಿಲ್ಲ. ಕ್ರಿಸ್ತಿಯನ್ ಲಾಬಿಗೆ ಹೈಕಮಾಂಡ್ ಒಪ್ಪಿಗೆ ಸಿಗುವ ಸಾಧ್ಯತೆಯೂ ಹೆಚ್ಚಿದೆ.

ಬಿಜೆಪಿ ಈಗಾಗಲೇ ನಿರ್ಮಲಾ ಸೀತಾರಾಮನ್ ಹೆಸರನ್ನು ಮರು ಆಯ್ಕೆಗೆ ಶಿಫಾರಸು ಮಾಡಿದೆ. ಕಳೆದ ಬಾರಿ ಬಿಜೆಪಿಯಿಂದ ಆಯ್ಕೆಗೊಂಡಿದ್ದ ಕೆ.ಸಿ.ರಾಮಮೂರ್ತಿ ಸ್ಥಾನಕ್ಕೆ ಬೇರೆ ಹೆಸರು ಅಂತಿಮಗೊಂಡಲ್ಲಿ ಅಚ್ಚರಿ ಪಡಬೇಕಿಲ್ಲ. ರಾಮಮೂರ್ತಿ ಹೆಸರಿನ ಜೊತೆಗೆ ಲಹರಿ ವೇಲು ಮತ್ತು ಪ್ರಕಾಶ್ ಶೆಟ್ಟಿ ಹೆಸರು ಮುನ್ನೆಲೆಯಲ್ಲಿದೆ. ಇವರಿಬ್ಬರು ಕೂಡ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿಯಲ್ಲಿ ಉತ್ತಮ ನಂಟು ಹೊಂದಿದ್ದಾರೆ. 122 ವಿಧಾನಸಭೆ ಸದಸ್ಯರನ್ನು ಹೊಂದಿರುವ ಬಿಜೆಪಿ ಸರಾಗವಾಗಿ ಎರಡು ಸೀಟು ಗೆಲ್ಲುವ ಅವಕಾಶ ಇದೆ. ಆದರೆ ಕಾಂಗ್ರೆಸ್(69) ಒಂದು ಸ್ಥಾನವನ್ನಷ್ಟೇ ಗೆಲ್ಲಬಹುದು.


ಮೂರನೇ ಅಭ್ಯರ್ಥಿ ಕಣಕ್ಕಿಳಿಸುತ್ತಾ ಬಿಜೆಪಿ ?
ರಾಜ್ಯದಿಂದ ನಾಲ್ಕನೇ ಸದಸ್ಯರನ್ನು ಆಯ್ಕೆ ಮಾಡಲು ಜೆಡಿಎಸ್ ಇತರರ ಬೆಂಬಲ ಪಡೆಯಬೇಕಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ಹೆಚ್ಚುವರಿ ಮತಗಳನ್ನು ಪಡೆದು 32 ಸೀಟು ಹೊಂದಿರುವ ಜೆಡಿಎಸ್ ಒಂದು ಸ್ಥಾನ ಗೆಲ್ಲಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಆ ಮಟ್ಟಿನ ಗೆಲುವು ಪಡೆಯಬಹುದು ಎನ್ನುವ ಛಾತಿ ಹೊಂದಿರುವಂತಿಲ್ಲ. ಈಗಾಗಲೇ ಜೆಡಿಎಸ್ ಶಾಸಕರು ಬಿಜೆಪಿ ಮತ್ತು ಕಾಂಗ್ರೆಸ್ ಕಡೆಗೆ ಮುಖ ಮಾಡಿರುವುದರಿಂದ ಚುನಾವಣೆಯಲ್ಲಿ ಶಾಸಕರು ಪಕ್ಷದ ಪರ ಮತ ಚಲಾಯಿಸುತ್ತಾರೆಂಬ ಗ್ಯಾರಂಟಿ ಇಲ್ಲ. ಒಂದು ರಾಜ್ಯಸಭೆ ಸ್ಥಾನ ಗೆಲ್ಲಲು 45 ವಿಧಾನಸಭೆ ಸೀಟು ಬೇಕಿರುವುದರಿಂದ ಕಾಂಗ್ರೆಸ್ ಒಂದು ಸ್ಥಾನ ಮಾತ್ರ ಗೆಲ್ಲಬಹುದು. ಆದರೆ 32 ಶಾಸಕರನ್ನು ಹೊಂದಿರುವ ಜೆಡಿಎಸ್‌ಗೆ ಕನಿಷ್ಠ 13 ಹೆಚ್ಚಿನ ಶಾಸಕರ ಮತಗಳು ಬೇಕಾಗುತ್ತವೆ. ಹೀಗಾಗಿ ಸದ್ಯದ ಬೆಳವಣಿಗೆಯಲ್ಲಿ ಬಿಜೆಪಿಯು ಮೂರನೇ ಅಭ್ಯರ್ಥಿ ಕಣಕ್ಕಿಳಿಸಿದರೆ ಜೆಡಿಎಸ್ ಬೆಂಬಲಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಜೊತೆಗೂಡಿದರೂ ಒಂದು ಸ್ಥಾನ ಗೆಲ್ಲಬಹುದು. ಆದರೆ ಅಂತಹ ಮೈತ್ರಿ ಕಷ್ಟ ಎನ್ನುವ ಸ್ಥಿತಿ ಇರುವುದರಿಂದ ಬಿಜೆಪಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆಯೇ ಹೆಚ್ಚು.
Karnataka Congress is contemplating to field Priyanka Gandhi Vadra for the Rajya Sabha from the state to boost the party ahead of next year's Assembly elections. Sources in the Congress confirmed that its state unit chief D.K. Shivakumar and Opposition leader Siddaramaiah have already approached Priyanka Gandhi on this matter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm