ಬ್ರೇಕಿಂಗ್ ನ್ಯೂಸ್
23-05-22 11:58 am Bengalore Correspondent ಕರ್ನಾಟಕ
ಬೆಂಗಳೂರು, ಮೇ 23: ಕೇಂದ್ರ ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೊಳಿಸಿರುವ ಮೋಟಾರು ವಾಹನ ನಿಯಮಗಳನ್ನು ರಾಜ್ಯದಲ್ಲಿ ಯಥಾವತ್ ಅನುಷ್ಠಾನಕ್ಕೆ ತರಲು ರಾಜ್ಯ ಸರ್ಕಾರದ ನಿರ್ಧರಿಸಿದೆ. ಅದರಂತೆ ನಂಬರ್ ಪ್ಲೇಟ್ ಮೇಲೆ ಯಾವುದೇ ಹೆಸರು, ಸರ್ಕಾರಿ ಲಾಂಛನ, ಇತರ ಲೋಗೋ ಸೇರಿದಂತೆ ಯಾವುದೂ ಇರುವಂತಿಲ್ಲ. ಕೇವಲ ವಾಹನ ನೋಂದಣಿ ಸಂಖ್ಯೆ ಮಾತ್ರ ಇರಬೇಕು ಎಂಬುದಾಗಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.
1989 ರ ಮೋಟಾರು ವಾಹನ ನಿಯಮದಲ್ಲಿರುವ ಮಾನದಂಡಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಇದಕ್ಕೆ ಸರ್ಕಾರಿ ನೌಕರರು, ನಿಗಮ ಮಂಡಳಿ, ಸಹಕಾರಿ ಸಂಘದ ಅಧ್ಯಕ್ಷರು ಹೊರತಲ್ಲ. ನಂಬರ್ ಪ್ಲೇಟ್ ಮೇಲೆ ಸಂಘ ಸಂಸ್ಥೆಗಳ ಹೆಸರು, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಯಾವುದೇ ಲೋಗೋ ಕೂಡ ಇರಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.

ನಂಬರ್ ಪ್ಲೇಟ್ ಕೆಳಭಾಗದಲ್ಲಿ ಅಥವಾ ಮೇಲ್ಬಾಗದಲ್ಲಿ ಸರ್ಕಾರಿ ಲೋಗೋ, ಸರ್ಕಾರಿ ಸಂಸ್ಥೆಗಳ ಹೆಸರು ಬಳಕೆ ಮಾಡುವುದಿದ್ದರೆ ಕೇಂದ್ರ ಸರ್ಕಾರದ ಅನುಮತಿ ಪಡೆಯಬೇಕೆಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಬರಹ, ಸ್ಟಿಕ್ಕರ್ ಇರಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕರ್ನಾಟಕ ರಾಜ್ಯಪತ್ರದಲ್ಲಿ ಎರಡು ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದ್ದಾರೆ. ವಾಹನಗಳ ನೋಂದಣಿ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Karnataka Vehicle registration plates should not have any stickers and logo orders state government.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm