ಬ್ರೇಕಿಂಗ್ ನ್ಯೂಸ್
02-06-22 11:19 am HK News Desk ದೇಶ - ವಿದೇಶ
ಓಕ್ಲಹೋಮಾ, ಜೂ 02: ಅಮೆರಿಕದಲ್ಲಿ ಮತ್ತೊಂದು ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಬಂದೂಕು ಹಿಡಿದು ಬಂದ ವ್ಯಕ್ತಿಯೊಬ್ಬ ಆಸ್ಪತ್ರೆಯ ಆವರಣದಲ್ಲಿ ಗುಂಡಿನ ದಾಳಿ ನಡೆಸಿದ್ದು, ನಾಲ್ಕು ಮಂದಿ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.
ಓಕ್ಲಹೋಮಾದ ಟಲ್ಸಾದಲ್ಲಿರುವ ಸೇಂಟ್ ಫ್ರಾನ್ಸಿಸ್ ಆಸ್ಪತ್ರೆಯಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಕೋರ ಸಹ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಆಸ್ಪತ್ರೆ ಕಟ್ಟಡದ ಎರಡನೇ ಮಹಡಿಯಲ್ಲಿ ವ್ಯಕ್ತಿಯೊಬ್ಬ ಬಂದೂಕು ಹಿಡಿದಿರುವ ಬಗ್ಗೆ ಕರೆ ಬಂದಿತ್ತು. ಅಧಿಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಕೆಲವು ಜನರ ಮೇಲೆ ಗುಂಡಿನ ದಾಳಿ ನಡೆದಿತ್ತು. ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಹಂತಕನ ಬಳಿ ದೊಡ್ಡ ರೈಫಲ್ ಮತ್ತು ಪಿಸ್ತೂಲ್ ಇತ್ತು ಎಂದಿದ್ದಾರೆ.
ಮೇ ತಿಂಗಳು ಅಮೆರಿಕದಲ್ಲಿ ನಡೆದ ಎರಡು ದೊಡ್ಡ ಸಾಮೂಹಿಕ ಗುಂಡಿನ ದಾಳಿಗಳ ಬೆನ್ನಲ್ಲೇ ಈ ದಾಳಿ ನಡೆದಿದೆ. ಕಳೆದ ವಾರ ಬಂದೂಕುದಾರಿಯೊಬ್ಬ 19 ಮಕ್ಕಳು ಮತ್ತು ಇಬ್ಬರು ಶಿಕ್ಷಕರನ್ನು ಗುಂಡಿಕ್ಕಿ ಕೊಂದ ಘಟನೆ ಟೆಕ್ಸಾಸ್‌ನಲ್ಲಿ ನಡೆದಿತ್ತು. ನ್ಯೂಯಾರ್ಕ್‌ನಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕು ಹಿಡಿದ ವ್ಯಕ್ತಿಯು 10 ಜನರನ್ನು ಬಲಿ ಪಡೆದಿದ್ದ. ಈ ಘಟನೆಗಳು ಬಂದೂಕು ನಿಯಂತ್ರಣದ ಕುರಿತು ಭಾರೀ ಚರ್ಚೆಯನ್ನು ಸೃಷ್ಟಿಸಿದೆ.
Four people have been killed in a shooting spree at a hospital in Tulsa, Oklahoma, police say. Officers confirmed that the suspected shooter, who was armed with a rifle and a handgun, was also dead. Police arrived at the scene on Wednesday afternoon at St Francis Hospital in three minutes - which they say ensured the death toll wasn't higher.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm