ಬ್ರೇಕಿಂಗ್ ನ್ಯೂಸ್
03-06-22 03:01 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 3: ನೇಶನಲ್ ಹೆರಾಲ್ಡ್ ಕುರಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜೂನ್ 13ರಂದು ವಿಚಾರಣೆಗೆ ಹಾಜರಾಗಲು ಮತ್ತೊಮ್ಮೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಹಿಂದೆ ಜೂನ್ 2ಕ್ಕೆ ನೀಡಿದ್ದ ಸಮನ್ಸ್ ಗೆ ವಿದೇಶದಲ್ಲಿದ್ದ ರಾಹುಲ್ ಗಾಂಧಿ ವಿನಾಯ್ತಿ ಕೋರಿದ್ದರು.
ಹೊಸತಾಗಿ ಸಮನ್ಸ್ ನೀಡಿರುವುದರಿಂದ ಜಾರಿ ನಿರ್ದೇಶನಾಲಯದ ದೆಹಲಿಯಲ್ಲಿರುವ ಪ್ರಧಾನ ಕಚೇರಿಯಲ್ಲಿ 13ರಂದು ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಬೇಕಾಗಿದೆ. ಅವರ ತಾಯಿ ಸೋನಿಯಾ ಗಾಂಧಿಗೂ ಸಮನ್ಸ್ ನೀಡಿದ್ದು, ಜೂನ್ 8ರಂದು ಹಾಜರಾಗಲು ಸೂಚನೆ ನೀಡಲಾಗಿದೆ. ಆದರೆ ಸೋನಿಯಾ ಅವರಿಗೆ ಕೋವಿಡ್ ಸೋಂಕು ಆಗಿರುವುದರಿಂದ ಅಂದು ಹಾಜರಾಗಲು ಸಾಧ್ಯವಿಲ್ಲ ಎಂದು ವಿನಾಯ್ತಿ ಕೋರಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಸ್ವಾಮಿ ಕಂಟಕ
ಬಿಜೆಪಿ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ 2013ರಲ್ಲಿ ನೀಡಿದ್ದ ಖಾಸಗಿ ದೂರಿನಂತೆ ಸೋನಿಯಾ ಗಾಂಧಿ, ರಾಹುಲ್ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಸೋಸಿಯೇಟೆಡ್ ಜರ್ನಲ್ ಎಂಬ ಸಂಸ್ಥೆಯಡಿ ನಡೆಸಲ್ಪಡುತ್ತಿದ್ದ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು 2009ರಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಒಡೆತನದ ಯಂಗ್ ಇಂಡಿಯಾ ಸಂಸ್ಥೆಯು ಖರೀದಿಸಿತ್ತು. ಆದರೆ, ಕೇವಲ 50 ಲಕ್ಷ ರೂಪಾಯಿಗೆ ಪತ್ರಿಕೆಯನ್ನು ಖರೀದಿಸಲಾಗಿದೆ ಎನ್ನುವ ಆರೋಪಗಳಿದ್ದು, ಪತ್ರಿಕೆಯು ದೆಹಲಿ, ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧ ಕಡೆಗಳಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದೆ.
ಕಾಂಗ್ರೆಸ್ ಪಕ್ಷದ ವತಿಯಿಂದ ಸ್ವಾತಂತ್ರ್ಯ ಕಾಲದಿಂದಲೂ ನಡೆಸಲ್ಪಡುತ್ತಿದ್ದ ನ್ಯಾಶನಲ್ ಹೆರಾಲ್ಡ್ ಪತ್ರಿಕೆಯನ್ನು 2006ರಲ್ಲಿ ಮುದ್ರಣ ನಿಲ್ಲಿಸಲಾಗಿತ್ತು. ಈ ನಡುವೆ, ಪತ್ರಿಕೆ ನಷ್ಟದಲ್ಲಿದೆಯೆಂದು ಕಾಂಗ್ರೆಸ್ ಪಕ್ಷದ ಖಾತೆಯಿಂದ 90 ಕೋಟಿ ಸಾಲ ನೀಡಲಾಗಿತ್ತು. ಪತ್ರಿಕಾ ಸಂಸ್ಥೆಯಲ್ಲಿ 5 ಸಾವಿರಕ್ಕೂ ಹೆಚ್ಚು ಷೇರುದಾರರಿದ್ದರು. ಹೀಗಿದ್ದರೂ, ಯಂಗ್ ಇಂಡಿಯಾ ಸಂಸ್ಥೆಯು ಅತಿ ಕಡಿಮೆ ಮೊತ್ತಕ್ಕೆ ಅದನ್ನು ಖರೀದಿಸಿ, ಅದರ ಆಸ್ತಿಯನ್ನು ಗಾಂಧಿ ಕುಟುಂಬ ಮತ್ತು ಆಪ್ತರು ಸೇರಿಕೊಂಡು ಪರಭಾರೆ ಮಾಡಿಕೊಂಡಿದ್ದರು ಎನ್ನುವ ಆರೋಪಗಳಿದ್ದವು. ಯಂಗ್ ಇಂಡಿಯಾ ಟ್ರಸ್ಟ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ, ಪವನ್ ಬನ್ಸಾಲ್, ಆಸ್ಕರ್ ಫೆರ್ನಾಂಡಿಸ್ ಸೇರಿದಂತೆ ಗಾಂಧಿ ಕುಟುಂಬದ ಆಪ್ತರು ಇದ್ದಾರೆ. ಅಕ್ರಮ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪದಡಿ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯ ಹೇಳಿಕೆಯನ್ನು ದಾಖಲಿಸುವುದಕ್ಕಾಗಿ ಇಡಿ ಅವರನ್ನು ವಿಚಾರಣೆಗೆ ಕರೆದಿದೆ. ಆನಂತರ, ಪ್ರಕರಣದ ಬಗ್ಗೆ ಇಡಿ ಅಧಿಕಾರಿಗಳು ಕೋರ್ಟಿಗೆ ಚಾರ್ಜ್ ಶೀಟ್ ಹಾಕಲಿದ್ದಾರೆ.
The Enforcement Directorate (ED) has issued fresh summons to Congress MP Rahul Gandhi to appear before it on June 13 for questioning in a money laundering case linked to the National Herald newspaper, officials said on Friday. He was earlier asked to depose on June 2 but the Lok Sabha member from Wayanad seat in Kerala sought a fresh date as he was out of the country.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 11:11 am
Mangalore Correspondent
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm