ಬ್ರೇಕಿಂಗ್ ನ್ಯೂಸ್
08-06-22 03:03 pm HK News Desk ದೇಶ - ವಿದೇಶ
ನವದೆಹಲಿ, ಜೂ 8: ಬುಧವಾರ ದೆಹಲಿಯ ಜಾಮಿಯಾ ನಗರದ ಎಲೆಕ್ಟ್ರಿಕ್ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಕಾರುಗಳು ಸೇರಿ 90ಕ್ಕೂ ಹೆಚ್ಚು ವಾಹಗಳು ಸುಟ್ಟು ಭಸ್ಮವಾಗಿವೆ.
11 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ ಹಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಕಾರು, ಇ-ರಿಕ್ಷಾಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಜಾಮಿಯಾ ನಗರದದಲ್ಲಿರುವ ಪಾರ್ಕಿಂಗ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮುಂಜಾನೆ ದೂರವಾಣಿ ಕರೆ ಬಂದಿತ್ತು ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.
![]()
ಘಟನೆಯಲ್ಲಿ ಒಟ್ಟು 10 ಕಾರುಗಳು, ಒಂದು ಮೋಟಾರ್ ಸೈಕಲ್, ಎರಡು ಸ್ಕೂಟಿ, 30 ಹೊಸ ಇ-ರಿಕ್ಷಾಗಳು ಮತ್ತು 50 ಹಳೆಯ ಇ-ರಿಕ್ಷಾಗಳು ಬೆಂಕಿಗೆ ಆಹುತಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಇ-ರಿಕ್ಷಾದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಇನ್ನು ಈ ಘಟನೆ ನಡೆಯುವ ಕೆಲವು ಗಂಟೆಗಳ ಹಿಂದೆ ಮತ್ತೊಂದು ಬೆಂಕಿ ಅವಘಡ ನಡೆದಿದೆ. ದೆಹಲಿಯ ಉತ್ತರ ಬ್ಲಾಕ್‌ನಲ್ಲಿರುವ ಗೃಹ ವ್ಯವಹಾರಗಳ ಸಚಿವಾಲಯದ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಕರೆ ಬಂದಿತ್ತು, ಉತ್ತರ ಬ್ಲಾಕ್‌ನಲ್ಲಿರುವ ದೂರವಾಣಿ ವಿನಿಮಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದ್ದರು.
ತಕ್ಷಣ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿವೆ. ಇದುವರೆಗೂ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.

ಶಾಖದ ಅಲೆಗಳ ಹೊಡೆತಕ್ಕೆ ಸಿಲುಕಿರುವ ರಾಷ್ಟ್ರ ರಾಜಧಾನಿಯಲ್ಲಿ ಬೆಂಕಿ ಅವಘಡಗಳು ನಡೆಯುತ್ತಲೇ ಇದೆ. ಇತ್ತೀಚೆಗಷ್ಟೆ ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಜನ ಸಾವನ್ನಪ್ಪಿದ್ದರು.
ದುರಂತದಲ್ಲಿ ಕೆಲವರ ದೇಹಗಳು ಸುಟ್ಟು ಕರಕಲಾಗಿದ್ದವು, ಡಿಎನ್‌ಎ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಮೃತದೇಹಗಳನ್ನು ಪತ್ತೆಹಚ್ಚಿ, ಕುಟುಂಬಸ್ಥರಿಗೆ ನೀಡಲಾಗಿತ್ತು.
Over 90 vehicles, including 10 cars, were gutted in a massive fire that broke out in a metro parking lot in the national capital on Wednesday morning, an official said. No casualties or injuries were reported in the incident. The official informed that they received a call about the fire incident around 5.00 a.m. at the Main Tikona Park, Jamia Nagar in South-East Delhi after which as many as 11 fire tenders were immediately pressed into service. The cause of the fire is yet to be ascertained.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 01:49 pm
HK News Staffer
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm