ಬ್ರೇಕಿಂಗ್ ನ್ಯೂಸ್
15-06-22 07:35 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 15: ಬಿಜೆಪಿ ಒಕ್ಕೂಟಕ್ಕೆದುರಾಗಿ ಒಮ್ಮತದ ರಾಷ್ಟ್ರಪತಿ ಅಭ್ಯರ್ಥಿಯನ್ನು ನಿಲ್ಲಿಸುವುದಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ದೆಹಲಿಯಲ್ಲಿ ದೇಶದ 17 ಪ್ರಮುಖ ರಾಜಕೀಯ ಪಕ್ಷಗಳನ್ನು ಒಟ್ಟು ಸೇರಿಸಿ ಸಭೆ ನಡೆಸಿದ್ದಾರೆ. ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿಸಲು ಯತ್ನ ನಡೆದಿತ್ತಾದರೂ, ಈ ಪ್ರಸ್ತಾಪಕ್ಕೆ ಸ್ವತಃ ಶರದ್ ಪವಾರ್ ಒಪ್ಪದೇ ಇದ್ದುದರಿಂದ ಎಲ್ಲರಿಗೂ ಸಲ್ಲುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸುವ ಬಗ್ಗೆ ದೆಹಲಿಯಲ್ಲಿ ಗಂಭೀರ ಚರ್ಚೆ ನಡೆದಿದೆ.
ರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾತ್ಮ ಗಾಂಧಿ ಅವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಪ್ರಸ್ತಾಪಿಸಿದ್ದಾರೆ. ಮಾತುಕತೆಗೆ 22 ರಾಜಕೀಯ ಪಕ್ಷಗಳ ನಾಯಕರಿಗೆ ಮಮತಾ ಬ್ಯಾನರ್ಜಿ ಆಹ್ವಾನ ನೀಡಿದ್ದರು. ಆದರೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ, ಆಮ್ ಆದ್ಮಿ ಪಾರ್ಟಿ, ತೆಲಂಗಾಣ ರಾಷ್ಟ್ರ ಸಮಿತಿ, ವೈಎಸ್ಸಾರ್ ಕಾಂಗ್ರೆಸ್, ಶಿರೋಮಣಿ ಅಕಾಲಿದಳ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಎಸ್ ಎಡಿ ಮತ್ತು ಟಿಆರ್ ಎಸ್ ನಾಯಕರು, ಸಭೆಯಲ್ಲಿ ಕಡು ವೈರಿ ಕಾಂಗ್ರೆಸನ್ನು ಒಳಗೊಳ್ಳಿಸಿದ ಕಾರಣಕ್ಕೆ ದೂರ ನಿಂತಿದ್ದಾರೆ ಎನ್ನಲಾಗುತ್ತಿದೆ.
ಮಮತಾ ನೇತೃತ್ವದ ಸಭೆಯಲ್ಲಿ ಕಾಂಗ್ರೆಸ್, ಎನ್ ಸಿಪಿ, ಆರ್ ಜೆಡಿ, ಎನ್ ಸಿ, ಸಿಪಿಎಂ, ಸಿಪಿಐ, ಶಿವಸೇನಾ, ಐಯುಎಂಎಲ್, ಪಿಡಿಪಿ, ಜೆಡಿಎಸ್, ಆರ್ ಎಲ್ ಡಿ ಪಕ್ಷಗಳ ನಾಯಕರು ಪಾಲ್ಗೊಂಡಿದ್ದಾರೆ. ಆಪ್ ನಾಯಕರು ತಾವು ಅಭ್ಯರ್ಥಿ ನಿರ್ಧರಿಸುವುದಕ್ಕೆ ಬರುವುದಿಲ್ಲ. ಅಭ್ಯರ್ಥಿ ಯಾರಾಗುತ್ತಾರೆಂದು ನೋಡಿ ನಾವು ಬೆಂಬಲ ನೀಡುವುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಸಭೆಯಲ್ಲಿ ಪಾಲ್ಗೊಳ್ಳಲು ಬಯಸುವುದಿಲ್ಲ ಎಂದಿದ್ದಾರೆ. ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಯಾರನ್ನು ಅಭ್ಯರ್ಥಿ ಮಾಡಿದರೂ ನಾವು ಬೆಂಬಲ ನೀಡುತ್ತೇವೆ ಎಂದಿದ್ದಾರೆ. ಬಿಜೆಪಿ ಒಕ್ಕೂಟದಿಂದ ಹೊರಗಿರುವ ಪ್ರಮುಖ ಪಕ್ಷವಾದ ವೈಎಸ್ಸಾರ್ ತನಗೆ ಮಮತಾ ಬ್ಯಾನರ್ಜಿ ಆಹ್ವಾನ ತಲುಪಿಲ್ಲ ಎಂದು ಹೇಳಿದೆ.
ಗೋಪಾಲಕೃಷ್ಣ ಗಾಂಧಿ ಅವರು 2017ರಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ವೆಂಕಯ್ಯ ನಾಯ್ಡು ವಿರುದ್ಧ ಸ್ಪರ್ಧಿಸಿದ್ದರು. 2004-09ರಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಗೋಪಾಲಕೃಷ್ಣ ಗಾಂಧಿ ಅವರೇ ರಾಷ್ಟ್ರಪತಿ ಅಭ್ಯರ್ಥಿ ಆಗಬೇಕೆಂದು ಹಲವು ವಿಪಕ್ಷ ನಾಯಕರು ಒತ್ತಾಯ ಮಾಡಿದ್ದಾರೆ ಎನ್ನಲಾಗುತ್ತಿದೆ. ಜುಲೈ 18ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇದಕ್ಕಾಗಿ ಜೂನ್ 15ರಿಂದ 29ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.
At the opposition meeting in Delhi today, West Bengal Chief Minister Mamata Banerjee proposed the names of National Conference chief Farooq Abdullah and Mahatma Gandhi’s grandson Gopalkrishna Gandhi as nominees for the July Presidential elections, sources said. NCP Sharad Pawar refused to contest the polls at the beginning of the meeting, sources added.
11-10-25 10:05 am
Bangalore Correspondent
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 11:03 pm
Mangalore Correspondent
Girish Mattannavar Mocks Dr. Mahabala Shetty:...
11-10-25 10:24 pm
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm