ಬ್ರೇಕಿಂಗ್ ನ್ಯೂಸ್
17-06-22 10:43 pm HK News Desk ದೇಶ - ವಿದೇಶ
ಮುಂಬೈ, ಜೂ 17: ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಅವರನ್ನು ಪೊಲೀಸರು ಠಾಣೆಗೆ ಕರೆಸಲು ಪ್ರಯತ್ನಿಸುತ್ತಿದ್ದು, 4 ದಿನಗಳಿಂದ ಹುಡುಕಾಡಿ ಸುಸ್ತಾಗಿದ್ದಾರೆ.
ಅವಹೇಳನಕಾರಿ ಹೇಳಿಕೆ ನೀಡಿ ದೇಶ ವಿದೇಶಗಳಲ್ಲಿ ಕೆಂಗಣ್ಣಿಗೆ ಗುರಿಯಾದ ನೂಪುರ್ ಶರ್ಮಾ ಬಿಜೆಪಿ ಪಕ್ಷದ ವಕ್ತಾರೆ ಸ್ಥಾನದಿಂದಲೂ ಅಮಾನತಾಗಿದ್ದರು. ಬಳಿಕ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅದರ ಆಧಾರದ ಮೇಲೆ ನೂಪುರ್ ಅವರನ್ನು ಕರೆಸಲಾಗಿತ್ತು. ಆದರೆ ಅವರಿಗೆ ಸಮನ್ಸ್ ಪೇಪರ್ ಹಸ್ತಾಂತರಿಸುವುದು ಹೇಗೆ ಎಂಬ ಪ್ರಶ್ನೆ ಪೊಲೀಸರಿಗೆ ಮೂಡಿದೆ. ಕಳೆದ 4 ದಿನಗಳಿಂದ ನೂಪುರ್ ಅವರನ್ನು ಮುಂಬೈ ಪೊಲೀಸರು ಹುಡುಕುತ್ತಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದ ಗೃಹ ಸಚಿವಾಲಯದ ವಿಶೇಷ ಮೂಲ ಇದನ್ನು ವರದಿ ಮಾಡಿದ್ದು, ನೂಪುರ್ ಶರ್ಮಾ ಅವರನ್ನು ಬಂಧಿಸಲು ಮುಂಬೈ ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿವೆ. ಹೀಗಾಗಿ ಪೈದೋನಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ನೂಪುರ್ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ.
ಮೊದಲಿಗೆ ಸಮನ್ಸ್ ಪ್ರತಿಯನ್ನು ಇ-ಮೇಲ್ ಮೂಲಕ ನೂಪುರ್ ಶರ್ಮಾ ಅವರಿಗೆ ಕಳುಹಿಸಲಾಗಿದ್ದು, ಅವರ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮುಂಬೈ ಪೊಲೀಸರ ತಂಡ ನಿಯಮಗಳ ಪ್ರಕಾರ ಸಮನ್ಸ್ ಪೇಪರ್ ಅನ್ನು ಹಸ್ತಾಂತರಿಸಲು ದೆಹಲಿಗೆ ತಲುಪಿದೆ. ಆದರೆ ಅಲ್ಲಿ ಅವರು 4 ದಿನಗಳಿಂದ ಜಾಲಾಡಿದರೂ ನೂಪುರ್ ಅವರ ಸುಳಿವು ಸಿಕ್ಕಿಲ್ಲ ಎಂಬುದು ತಿಳಿದುಬಂದಿದೆ.
ನೂಪುರ್ ಶರ್ಮಾ ಅವರ ವಿವಾದಿತ ಹೇಳಿಕೆಯ ಪರಿಣಾಮ ದೇಶಾದ್ಯಂತ ಅಶಾಂತಿಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವೂ ಒತ್ತಡದಲ್ಲಿದೆ.
ತೃಣಮೂಲ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸೊಹೈಲ್ ನೀಡಿದ ದೂರಿನ ಅನ್ವಯ ಕೋಲ್ಕತಾ ಪೊಲೀಸರು ನೂಪುರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 20ರಂದು ಹೇಳಿಕೆ ದಾಖಲಿಸುವಂತೆ ಕೋಲ್ಕತಾ ಪೊಲೀಸರು ಸಮನ್ಸ್ ನೀಡಿದ್ದಾರೆ. ದಿಲ್ಲಿಯಲ್ಲಿ ಕೂಡ ಅವರ ವಿರುದ್ಧ ಎಫ್‌ಐಆರ್ ಒಂದು ದಾಖಲಾಗಿದೆ.
ನೂಪುರ್ ಶರ್ಮಾ ಅವರ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿವಾದ ಸೃಷ್ಟಿಸಿತ್ತು. ಇರಾನ್, ಸೌದಿ ಅರೇಬಿಯಾ, ಕುವೈತ್, ಕತಾರ್ ಸೇರಿದಂತೆ 15ಕ್ಕೂ ಹೆಚ್ಚು ಮುಸ್ಲಿಂ ದೇಶಗಳು ಇದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿವೆ. ವ್ಯಾಪಕ ಟೀಕೆ ಹಾಗೂ ಪ್ರತಿಭಟನೆ ನಡುವೆ ನೂಪುರ್ ಶರ್ಮಾ ಅವರು ಬೇಷರತ್ತಾಗಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದರು. ಮಹಾದೇವ (ಶಿವ) ವಿರುದ್ಧ ನಿರಂತರ ಅಪಮಾನಕರ ಮತ್ತು ಅಗೌರವದ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿರುವುದಾಗಿ ಹೇಳಿದ್ದರು.
Nupur Sharma missing! Cases were registered against her in several police stations for his controversial remarks on Hazrat Mohammad (Prophet Mohammad Row). It was on the basis of these that Nupur was summoned. But the question is how to hand over the summons paper to Nupur? A mumbai police team is said to be searching for the expelled BJP leader for the past four days. But she can't be found.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm