ಬ್ರೇಕಿಂಗ್ ನ್ಯೂಸ್
15-07-22 09:45 pm HK News Desk ದೇಶ - ವಿದೇಶ
ಮುಂಬೈ, ಜುಲೈ 15: ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಈಜುವುದಾಗಿ ಹೇಳಿ ಸೇತುವೆ ಮೇಲಿಂದ ಜಿಗಿದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಮಾಲೆಂಗಾವ್ನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭಾರೀ ಮಳೆಗೆ ತುಂಬಿ ಭೋರ್ಗರೆಯುತ್ತಿರುವ ಗಿರ್ನಾ ನದಿಗೆ 23 ವರ್ಷದ ಯುವಕ ಸೇತುವೆ ಮೇಲಿಂದ ಜಿಗಿಯುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿದೆ.
ಯುವಕನ ಹೆಸರು ನಯೀಮ್j ಅಮೀನ್. ನಿನ್ನೆಯಿಂದಲೂ ಯುವಕನಿಗಾಗಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಈವರೆಗೂ ಆತ ಸುಳಿವು ಸಿಕ್ಕಿಲ್ಲ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ. ನೀರಿನ ಸೆಳೆತಕ್ಕಿ ಸಿಲುಕಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಮಹಾರಾಷ್ಟ್ರದ ಅನೇಕ ಜಿಲ್ಲೆಗಳು ಕಳೆದ ಒಂದು ವಾರದಿಂದ ಭಾರೀ ಮಳೆಗೆ ಸಾಕ್ಷಿಯಾಗಿದೆ. ಪುಣೆ, ನಾಸಿಕ್ ಸೇರಿದಂತೆ ಇತರೆ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಮಳೆ ಪರಿಣಾಮ ಪಾಲ್ಘರ್ ಜಿಲ್ಲೆಯ ವಾಸೈ ನಗರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ. ಅಲ್ಲದೆ, ಗೊಂಡಿಯಾ ಜಿಲ್ಲೆಯಲ್ಲಿ ನಾಲ್ವರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಪಶ್ಚಿಮ ಕರಾವಳಿ ಸೇರಿದಂತೆ ಭಾರತದ ಇತರ ಏಳು ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 22 ನದಿ ತಾಣಗಳಲ್ಲಿ ಎಚ್ಚರಿಕೆಯ ಮಟ್ಟಕ್ಕಿಂತ ಹೆಚ್ಚಿನ ನೀರು ಹರಿಯುವುದರಿಂದ ಪ್ರವಾಹ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ನಿರೀಕ್ಷೆಯಿದೆ. ಈ ಬಗ್ಗೆ ನದಿ ಪಾತ್ರದ ಜನರಿಗೆ ಈಗಾಗಲೇ ಎಚ್ಚರಿಕೆಯನ್ನು ನೀಡಲಾಗಿದೆ.
मालेगाव, नाशिक : स्टंटबाजी करत तरुणाने गिरणा पुलावरुन नदीत मारली उडी; बेपत्ता तरुणाचा शोध सुरु...#Nashik #Malegaon #HeavyRain #Stunt #ViralVideo
— Akshay Baisane (अक्षय बैसाणे) (@Baisaneakshay) July 14, 2022
Video Credit: Abhijeet Sonawane pic.twitter.com/zB3HgUIQEW
A 23-year-old man from Malegaon in Maharshtra has gone missing after he dived from a bridge into an overflowing river in an act of bravado. The incident occurred in Maharashtra's Malegaon yesterday.A video of the stunt dive that went horribly wrong has gone viral on social media. It shows the man diving into the Girna river which is spate due to torrential rains and after that he does not surface as expected. There are other men on the bridge watching him perform the act.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm