ಬ್ರೇಕಿಂಗ್ ನ್ಯೂಸ್
02-10-20 03:22 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲೇ ಡೊನಾಲ್ಡ್ ಟ್ರಂಪ್‍ಗೆ ಸಂಕಷ್ಟ ಎದುರಾಗಿದ್ದು, ಟ್ರಂಪ್ ಹಾಗೂ ಪತ್ನಿ ಮೆಲಾನಿಯಾ ಟ್ರಂಪ್ ಕೊರೊನಾ ವರದಿ ಪಾಸಿಟಿವ್ ಬಂದಿದೆ.
ಟ್ರಂಪ್ ಸಲಹ ತಂಡದ ಹೋಪ್ ಹಿಕ್ಸ್ ಅವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಟ್ರಂಪ್ ದಂಪತಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಇಬ್ಬರಿಗೂ ಕೊರೊನಾ ಸೋಂಕು ಇರುವುದು ದೃಢವಾಗಿದೆ.
ಈ ವಿಚಾರವನ್ನು ಸ್ವತಃ ಟ್ರಂಪ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನಾನು ಮತ್ತು ಮೆಲಾನಿಯಾ ಕೋವಿಡ್ ಸೋಂಕಿಗೆ ತುತ್ತಾಗಿದ್ದೇವೆ. ನಾವು ಈಗಾಗಲೇ ಕ್ವಾರಂಟೈನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದೇವೆ. ಒಟ್ಟಾಗಿ ನಾವು ಸೋಂಕನ್ನು ಎದುರಿಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ.
Tonight, @FLOTUS and I tested positive for COVID-19. We will begin our quarantine and recovery process immediately. We will get through this TOGETHER!
— Donald J. Trump (@realDonaldTrump) October 2, 2020
ನವೆಂಬರ್ 3ರಂದು ಅಮೆರಿಕ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಟ್ರಂಪ್ ಮಂಗಳವಾರ ನಡೆದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಹೋಪ್ ಹಿಕ್ಸ್ ಅವರೊಂದಿಗೆ ಪ್ರಯಾಣಿಸಿದ್ದರು. ಈ ಕುರಿತು ಮಾಧ್ಯಮ ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದ ಟ್ರಂಪ್, ಹೋಪ್ ಹಿಕ್ಸ್ ಶ್ರಮ ಜೀವಿ. ಆಕೆ ಮಾಸ್ ಧರಿಸುತ್ತಿದ್ದರು ಕೊರೊನಾ ಪಾಟಿಸಿವ್ ಬಂದಿದೆ. ನಾವು ಅವರೊಂದಿಗೆ ಹೆಚ್ಚಿನ ಸಮಯ ಕಳೆದ ಕಾರಣ ಪರೀಕ್ಷೆ ಮಾಡಿಸಿದ್ದೇವು ಎಂದು ಹೇಳಿದ್ದಾರೆ.
ಚುನಾವಣೆ ಹತ್ತಿರವಾದ ಸಂದರ್ಭದಲ್ಲೇ ಕೊರೊನಾದೃಢವಾದ ಹಿನ್ನೆಲೆಯಲ್ಲಿ ಟ್ರಂಪ್ ಅನಿವಾರ್ಯವಾಗಿ ಚುನಾವಣಾ ಪ್ರಚಾರದಿಂದ ದೂರ ಉಳಿಯಬೇಕಿದೆ. ಈ ಹಿಂದೆ ಕೊರೊನಾ ವ್ಯಾಕ್ಸಿನ್ ಕುರಿತು ಮಾತನಾಡಿದ್ದ ಟ್ರಂಪ್, ಅಮೆರಿಕ ಅಧ್ಯಕ್ಷೀಯ ಚುನಾವಣೆಗೂ ಮುನ್ನವೇ ವ್ಯಾಕ್ಸಿನ್ ಲಭ್ಯವಾಗಲಿದೆ. ಅದಕ್ಕೆ ಬೇಕಾಗಿರುವ ಹಣವನ್ನು ಮೀಸಲಿಡಲಾಗಿದೆ ಎಂದು ಹೇಳಿದ್ದರು. ಆದರೆ ಸದ್ಯ ಚುನಾವನೆಯ ವೇಳೆಗೆ ವ್ಯಾಕ್ಸಿನ್ ಲಭಿಸುವುದು ಅನುಮಾನ ಎನ್ನಲಾಗಿದೆ.
Wishing my friend @POTUS @realDonaldTrump and @FLOTUS a quick recovery and good health. https://t.co/f3AOOHLpaQ
— Narendra Modi (@narendramodi) October 2, 2020
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm