ಬ್ರೇಕಿಂಗ್ ನ್ಯೂಸ್
18-08-22 03:58 pm HK News Desk ದೇಶ - ವಿದೇಶ
ಮುಂಬೈ, ಆಗಸ್ಟ್ 18: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಸಮುದ್ರ ತೀರದಲ್ಲಿ ಶಂಕಿತ ಬೋಟ್ ಕಂಡುಬಂದಿದ್ದು, ಅದರಲ್ಲಿ ಎಕೆ 47 ರೈಫಲ್ಸ್, ಮದ್ದುಗುಂಡುಗಳು ಹಾಗೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದರ ಬೆನ್ನಲ್ಲೇ ಮಂಬೈ ನಗರ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಹೈಎಲರ್ಟ್ ಮಾಡಲಾಗಿದೆ.
ರಾಯಗಢ ಜಿಲ್ಲೆಯ ಹರಿಹರೇಶ್ವರ ಎಂಬಲ್ಲಿನ ಸಮುದ್ರ ತೀರದಲ್ಲಿ ಬೋಟ್ ಪತ್ತೆಯಾಗಿದ್ದು, ಉಗ್ರರ ಜಾಡಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಾಯಗಢ ಎಸ್ಪಿ ಅಶೋಕ್ ಧುಡೆ, ಬೋಟಿನಲ್ಲಿ ಎಕೆ 47 ರೈಫಲ್ ಪತ್ತೆಯಾಗಿರುವುದನ್ನು ದೃಢಪಡಿಸಿದ್ದು, ಬೋಟ್ ಯಾವ ರೀತಿಯದ್ದು ಅನ್ನುವ ಬಗ್ಗೆ ಮಾಹಿತಿ ನೀಡಿಲ್ಲ. ಮುಂಬೈನಿಂದ 200 ಕಿಮೀ ದೂರದಲ್ಲಿ ಬೋಟ್ ಪತ್ತೆಯಾಗಿದ್ದು, ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
![]()
ಬೋಟಿನಲ್ಲಿದ್ದ ಬಾಕ್ಸ್ ಒಂದರಲ್ಲಿ ಮೂರು ಎಕೆ 47 ರೈಫಲ್ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ಬೋಟ್ ಆಸ್ಟ್ರೇಲಿಯಾ ನಿರ್ಮಿತ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಟಿಎಸ್ ಮುಖ್ಯಸ್ಥ ವಿನೀತ್ ಅಗರ್ವಾಲ್, ಉಗ್ರರಿಗೆ ಸಂಬಂಧಪಟ್ಟ ಶಸ್ತ್ರಾಸ್ತ್ರಗಳೇ ಅನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಬೋಟ್ ಮೇಲ್ನೋಟಕ್ಕೆ ಒಮಾನಲ್ಲಿ ರಿಜಿಸ್ಟರ್ ಆಗಿರುವಂತೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಬೋಟ್ ಅನಾಥ ಸ್ಥಿತಿಯಲ್ಲಿ ಕಂಡುಬಂದಿದೆ. ಆದರೆ, ಹೊರ ದೇಶದ ಬೋಟ್ ಆಗಿರುವುದರಿಂದ ಉಗ್ರರ ಕೆಲಸ ಆಗಿರಬಹುದು ಅನ್ನುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅಗರ್ವಾಲ್ ತಿಳಿಸಿದ್ದಾರೆ.
Maharashtra police on Thursday found a suspected terror boat near Harihareshwar shore in Raigad district of the state carrying AK 47, some rifles and bullets. Following the recovery, police has issued a “high alert” in the district.SP Raigad Mr Ashok Dhudhe confirmed about AK 47 being found in boat near Harihareshwar beach. The place is about 200 km from Mumbai and 170 km from Pune.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm