ಬ್ರೇಕಿಂಗ್ ನ್ಯೂಸ್
21-08-22 10:36 pm HK News Desk ದೇಶ - ವಿದೇಶ
ಭೋಪಾಲ್,ಆಗಸ್ಟ್ 21: ತಲೆಗೆ ಗಾಯಗೊಂಡು ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗೆ ಮೊರೆನಾ ಜಿಲ್ಲಾಸ್ಪತ್ರೆಗೆ ಬಂದಿದ್ದ ಮಹಿಳೆಯ ಬ್ಯಾಂಡೇಜ್ ತೆರೆದಾಗ ಅಲ್ಲಿದ್ದ ಕಾಂಡೋಮ್ ರ‍್ಯಾಪರ್ ನೋಡಿದ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಆಶ್ಚರ್ಯಗೊಂಡಿದ್ದಾರೆ.
ಆಸ್ಪತ್ರೆಗಳಲ್ಲಿ ಅವ್ಯವಸ್ಥೆ:
ಮೊರೆನಾ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಪ್ರಾಥಮಿಕ, ಉಪ ಆರೋಗ್ಯ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಹೊಂದಿರುವ ಸಿವಿಲ್ ಆಸ್ಪತ್ರೆ ಇದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆಗಳ ಸ್ಥಿತಿ ಹದಗೆಟ್ಟಿದ್ದು, ಸಾಮಾನ್ಯ ಪ್ರಕರಣಗಳಲ್ಲಿಯೂ ಚಿಕಿತ್ಸೆ ನೀಡದೆ ನೇರವಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತದೆ. ಈ ಮಹಿಳೆಗೂ ಅದೇ ರೀತಿ ಆಗಿದೆ. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಹಿಳೆಯ ತಲೆಗೆ ಹೊಲಿಗೆಗಳನ್ನು ಹಾಕದೆ ಬ್ಯಾಂಡೇಜ್ ಅಷ್ಟೇ ಹಾಕಿ ಜಿಲ್ಲಾಸ್ಪತ್ರೆಗೆ ಹೋಗುವಂತೆ ಹೇಳಿದ್ದಾರೆ.

ಕಾಂಡೋಮ್ ರ‍್ಯಾಪರ್ ಇಟ್ಟು ಗಾಯಕ್ಕೆ ಬ್ಯಾಂಡೇಜ್
ಮಹಿಳೆ ಆಸ್ಪತ್ರೆಗೆ ಬಂದಾಗ ಬ್ಯಾಂಡೇಜ್ ಸರಿಯಾಗದೆ ರಕ್ತ ಸೋರಿಕೆಯಾಗುತ್ತಿತ್ತು. ಗಾಯ ಸ್ವಚ್ಛಗೊಳಿಸಿ ಹೊಲಿಗೆ ಹಾಕಲು ಜಿಲ್ಲಾಸ್ಪತ್ರೆಯ ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ ಹತ್ತಿ ಇಡಬೇಕಾದಲ್ಲಿ ಕಾಂಡೋಮ್ ರ‍್ಯಾಪರ್ ಇಟ್ಟು ಬ್ಯಾಂಡೇಜ್ ಮಾಡಿರುವುದು ಬೆಳಕಿಗೆ ಬಂದಿದೆ. ಆದರೆ ಶುಕ್ರವಾರ ರಾತ್ರಿ ನಡೆದ ಈ ಘಟನೆಯನ್ನು ಲಘುವಾಗಿ ಪರಿಗಣಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಈ ಕುರಿತು ತನಿಖೆ ನಡೆಸುವಂತೆ ಆದೇಶಿಸಿದೆ.
ಕ್ರಮಕ್ಕೆ ಸೂಚನೆ ನೀಡಿದ ಸಿಎಂಎಚ್ಒ:
ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಡಾ ರಾಕೇಶ್ ಶರ್ಮಾ ಅವರು ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಬ್ಲಾಕ್ ವೈದ್ಯಾಧಿಕಾರಿ ಪೊರ್ಸಾ, ಡಾ.ಪುಷ್ಪೇಂದ್ರ ದಂಡೋತಿಯಾ ಅವರಿಗೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಿಎಂಎಚ್ಒ ಡಾ.ರಾಕೇಶ್ ಶರ್ಮಾ, ಮಹಿಳೆಯ ತಲೆಗೆ ಹತ್ತಿಯ ಬದಲು ಕಾಂಡೋಮ್ ರ‍್ಯಾಪರ್ ಕಟ್ಟಿರುವುದು ಗಂಭೀರ ವಿಚಾರವಾಗಿದ್ದು, ಈ ರೀತಿ ಬೇಜವಾಬ್ದಾರಿ ತೋರಿದ ಸಿಬ್ಬಂದಿಯನ್ನು ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Poor quality healthcare system, non-availability of hearse or pregnant women being taken to the hospital on cots are frequently reported from different parts of Madhya Pradesh.Now yet another glaring example of medical negligence has come to light, wherein the head wound of a woman was dressed with a condom wrapper.The shocking incident took place in Morena district, where a condom wrapper was used as a temporary bandage to stop bleeding from a head injury sustained by a woman named Reshma Bai.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm