ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.

ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.

ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm