ಬ್ರೇಕಿಂಗ್ ನ್ಯೂಸ್
08-10-20 06:54 pm Headline Karnataka News Network ದೇಶ - ವಿದೇಶ
ನವ ದೆಹಲಿ, ಅಕ್ಟೋಬರ್ .08 : ಲಾಕ್ಡೌನ್ ನಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಪೆಟ್ಟುಬಿದ್ದಿದ್ದು, ಚಿಕ್ಕಪುಟ್ಟ ಡಾಬಾಗಳ ಮುಖಾಂತರ ಸಾವಿರಾರು ಜನರಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಹೋಟೆಲ್ ಗಳು ಅಕ್ಷರಶಃ ನಲುಗಿಹೋಗಿದೆ.
ಇಂಥದ್ದೇ ಸಮಸ್ಯೆ ಎದುರಿಸುತ್ತಿದ್ದ ಕುಟುಂಬವೊಂದಕ್ಕೆ ಇದೀಗ ಸಾಮಾಜಿಕ ಜಾಲತಾಣದ ಮುಖಾಂತರ ನೆರವಿನ ಹಸ್ತ ಸಿಕ್ಕಿದೆ.
ಹೌದು. 80 ವರ್ಷದ ವೃದ್ಧ ದಂಪತಿ ದಕ್ಷಿಣ ದಿಲ್ಲಿಯ ಮಾಲವೀಯಾ ನಗರ್ ಪ್ರದೇಶದ ರಸ್ತೆ ಬದಿಯಲ್ಲಿ ಬಾಬಾ ಕಾ ಡಾಬಾ ಹೆಸರಿನಲ್ಲಿ ಹೊಟೇಲ್ ನಡೆಸುತ್ತಿದ್ದರು. ಆದರೆ ಕೊರೊನಾ ನಂತರದಲ್ಲಿ ಡಾಬಾಕ್ಕೆ ಜನರು ಬರದೇ ಇದ್ದುದ್ದನ್ನು ಕಂಡ ದಂಪತಿಗೆ ದಿಕ್ಕೇ ತೋಚದಂತಾಗಿತ್ತು. ಡಾಬಾ ಬಂದ್ ಆಗಿದ್ದರಿಂದ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ದೆಹಲಿಯಲ್ಲಿ ಇನ್ನೂ ಪರಿಸ್ಥಿತಿ ಸಂಪೂರ್ಣ ಸಹಜ ಸ್ಥಿತಿಗೆ ಬರದ ಹಿನ್ನೆಲೆಯಲ್ಲಿ ಇವರ ಗೋಳು ಕೇಳುವವರೇ ಇರಲಿಲ್ಲ.

ಇದರಿಂದ ತೀವ್ರ ತೊಂದರೆಗೊಳಗಾದ ವೃದ್ಧ, ಕ್ಯಾಮರಾ ಮುಂದೆ ಕಣ್ಣೀರಿಟ್ಟಿದ್ದರು. ಈ ವಿಡಿಯೋವನ್ನು ವಸುಂಧರಾ ಶರ್ಮ ಎನ್ನುವವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು. ಬದುಕು ಹೇಗೆ ಮೂರಾಬಟ್ಟೆಯಾಗಿದೆ ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಂಪತಿಯ ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಅಜ್ಜನ ಡಾಬಾಕ್ಕೆ ಹೋಗಿ ಊಟ ಮಾಡುತ್ತಿದ್ದಾರೆ.
ಬಾಬಾ ಕಾ ಡಾಬಾ ಎಂಬ ಹೆಸರಿನ ಈ ಟ್ವಿಟರ್ ಅದೆಷ್ಟು ಮನಕ್ಕೆ ನಾಟಿದೆ ಎಂದರೆ ಬಾಲಿವುಡ್ ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಸಾರ್ವಜನಿಕರಿಂದ ಸಹಾಯದ ನೆರವೇ ಹರಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಟಾಪ್ ಟ್ರೆಂಡ್ ಆಗಿರುವ ಈ ಟ್ವಿಟರ್ ಸಾವಿರಾರು ಮನಸ್ಸನ್ನು ಗೆದ್ದುಬಿಟ್ಟಿದೆ.
ಬಾಲಿವುಡ್ ತಾರೆಯರಾದ ರವೀನಾ ಟಂಡನ್, ರಣದೀಪ್ ಹೂಡಾ, ಸ್ವರಾ ಭಾಸ್ಕರ್, ಗೌರವ್ ವಾಸನ್, ರವಿಚಂದ್ರ ಅಶ್ವಿನ್, ಸೋನಂ ಕಪೂರ್ ಸೇರಿದಂತೆ ಹಲವಾರು ಮಂದಿ ನೆರವಿಗೆ ಧಾವಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ ಭಾರತಿ ಅವರೂ ಖುದ್ದು ಡಾಬಾಕ್ಕೆ ಭೇಟಿಕೊಟ್ಟು ಸಹಾಯದ ಭರವಸೆ ನೀಡಿದ್ದಾರೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm