ಬ್ರೇಕಿಂಗ್ ನ್ಯೂಸ್
27-10-22 01:55 pm HK News Desk ದೇಶ - ವಿದೇಶ
ಕೊಚ್ಚಿ,ಅ.27 : ತನ್ನ ಮಕ್ಕಳ ಕೈಯಲ್ಲಿ ಅರೆಬೆತ್ತಲೆ ದೇಹದ ಮೇಲೆ ಡ್ರಾಯಿಂಗ್ ಮಾಡಿಸಿಕೊಳ್ಳುವ ಮೂಲಕ ಭಾರಿ ವಿವಾದಕ್ಕೀಡಾಗಿದ್ದ ಹಾಗೂ ಆಗಾಗ ಹಿಂದುಗಳ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವಂತಹ ಭಾವನೆಗಳನ್ನು, ನಡವಳಿಕೆಗಳನ್ನು ಪ್ರದರ್ಶಿಸುವ ಹೋರಾಟಗಾರ್ತಿ ರೆಹನಾ ಫಾತಿಮಾ ವಿರುದ್ಧ ಅವರ ತಾಯಿಯೇ ಇದೀಗ ದೂರು ದಾಖಲಿಸಿದ್ದಾರೆ.
ರೆಹನಾ ತಾಯಿ ಪ್ಯಾರಿ ಅವರು ಆಲಪ್ಪುಳ ನಾರ್ಥ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಮಾನಸಿಕ ಮತ್ತು ದೈಹಿಕವಾಗಿ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ.

ಮಗಳು ರೆಹನಾ ಮತ್ತು ಅಳಿಯನ ಜೊತೆ ಎರ್ನಾಕುಲಂನ ಫ್ಲ್ಯಾಟ್ನಲ್ಲಿ ಇರುವಾಗ ನನಗೆ ತುಂಬಾ ಕಿರುಕುಳ ನೀಡಿದ್ದಾರೆ. ಇದರಿಂದಾಗಿ ನಾನು ಆಲಪ್ಪುಳದಲ್ಲಿರುವ ನನ್ನ ಸಂಬಂಧಿಕರ ಮನೆಗೆ ಸ್ಥಳಾಂತರವಾಗಿದ್ದೇನೆ. ಕಳೆದ ಎರಡು ತಿಂಗಳಿಂದ ಸಂಬಂಧಿಕರ ಮನೆಯಲ್ಲೇ ಉಳಿದಿದ್ದೇನೆ. ಆದರೆ, ರೆಹನಾ ಅಲ್ಲಿಗೂ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ದೂರಿನಲ್ಲಿ ಪ್ಯಾರಿ ಅವರು ಉಲ್ಲೇಖಿಸಿದ್ದಾರೆ.
ಮಗಳ ಜೊತೆ ಬಾಳಲು ಆಸಕ್ತಿ ಇಲ್ಲ ಎಂದಿರುವ ಪ್ಯಾರಿ, ರೆಹಾನಾಗೆ ತನ್ನ ಸಂಬಂಧಿಕರಿಗೆ ತೊಂದರೆ ಮಾಡದಂತೆ ಎಚ್ಚರಿಕೆ ನೀಡುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ದೂರಿನ ಆಧಾರದ ಮೇಲೆ ಅಲಪ್ಪುಳ ನಾರ್ಥ್ ಪೊಲೀಸರು ರೆಹನಾ ಫಾತಿಮಾ ಅವರನ್ನು ಠಾಣೆಗೆ ಕರೆಸಿ, ಯಾವುದೇ ರೀತಿಯಲ್ಲಿ ತಾಯಿಗೆ ತೊಂದರೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.
ಅರೆಬೆತ್ತಲೆ ದೇಹದ ಮೇಲೆ ಚಿತ್ರ:
2020ರ ಜೂನ್ 19ರಂದು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಬಾಡಿ ಆರ್ಟ್ಸ್ ಪಾಲಿಟಿಕ್ಸ್ (#BodyArtPolitics) ಎಂಬ ಅಡಿಬರಹದೊಂದಿಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೆಹನಾ ತನ್ನ ಮಗ ಹಾಗೂ ಮಗಳ ಕೈಯಿಂದ ಅರೆಬೆತ್ತಲೆ ದೇಹದ ಮೇಲೆ ಚಿತ್ರ ಬಿಡಿಸಿಕೊಳ್ಳುತ್ತಿರುವ ದೃಶ್ಯವಿದೆ. ವಿಡಿಯೋ ಮಾಡಿದ್ದರ ಉದ್ದೇಶದ ಬಗ್ಗೆ ತಿಳಿಸಿದ್ದ ರೆಹನಾ, ಲೈಂಗಿಕತೆ ಮತ್ತು ನಗ್ನತೆ ನಿಷೇಧವಾಗಿರುವ ಸಮಾಜದಲ್ಲಿ ಮಹಿಳೆಯರು ಲೈಂಗಿಕತೆ ಮತ್ತು ಅವರ ದೇಹದ ಬಗ್ಗೆ ಮುಕ್ತವಾಗಿರಬೇಕು ಎಂದು ಪುನರುಚ್ಚರಿಸುವುದಕ್ಕಾಗಿ ಈ ವಿಡಿಯೋವನ್ನು ಮಾಡಿದ್ದಾಗಿ ಹೇಳಿದ್ದರು. ಇದರ ಬೆನ್ನಲ್ಲೇ ದೂರು ದಾಖಲಾಗಿತ್ತು. ಅಲ್ಲದೆ, ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಆಯೋಗವು ಸಹ ಮಧ್ಯಪ್ರವೇಶಿಸಿತ್ತು. ಇದರ ನಡುವೆ ರಾಜ್ಯ ಸರ್ಕಾರ ರೆಹಾನಾ ಜಾಮೀನು ನೀಡದಂತೆ ಅರ್ಜಿಯನ್ನು ಸಲ್ಲಿಸಿತ್ತು.
A fresh complaint has been filed against activist Rehana Fathima here on Wednesday. Her mother Pyari lodged a complaint with Alappuzha North police accusing her of mental and physical harassment.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm