ಬ್ರೇಕಿಂಗ್ ನ್ಯೂಸ್
29-10-22 01:11 pm HK News Desk ದೇಶ - ವಿದೇಶ
ನವದೆಹಲಿ, ಅ.29: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವಿಮಾನದ ಪೈಲಟ್ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ವಿಮಾನ ಟೇಕ್ ಆಫ್ ಆಗುತ್ತಿದ್ದಂತೆ ಬೆಂಕಿ ಹತ್ತಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಶುಕ್ರವಾರ ರಾತ್ರಿ 9.45 ರ ಸುಮಾರಿಗೆ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ 6E-2131 ವಿಮಾನ ಟೇಕಾಫ್ ಆಗಿತ್ತು. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಪೈಲಟ್ ಟೇಕಾಫ್ ಆಗ್ತಿದ್ದ ವಿಮಾನವನ್ನ ಮತ್ತೆ ತಕ್ಷಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಅಲ್ಲದೆ, ವಿಮಾನ ನಿಲ್ದಾಣದ ಸಿಬ್ಬಂದಿಗೆ ಬೆಂಕಿ ಕಾಣಿಸಿದ್ದ ಕುರಿತು ಮಾಹಿತಿ ರವಾನಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನ ನಂದಿಸಿದ್ದಾರೆ. ಘಟನೆ ಬಳಿಕ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳ ಹಾರಾಟವನ್ನೂ ಸಹ ರದ್ದು ಮಾಡಲಾಗಿತ್ತು.
ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಒಟ್ಟು 184 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನ್ ಟೇಕಾಫ್ ಆಗುವಾಗ ಕೆಲವು ಪ್ರಯಾಣಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಕಂಡುಬಂದಿದ್ದು ಎಲ್ಲರೂ ಒಂದು ಕ್ಷಣ ಗಾಬರಿಯಾಗಿದ್ದಾರೆ. ವಿಮಾನದ ಎಂಜಿನ್ ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರಯಾಣಿಕರು ಸೆರೆ ಹಿಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video: IndiGo Plane's Engine Catches Fire Moments Before Take-Off In Delhi https://t.co/Q3XPWKhpLL pic.twitter.com/MCderoDhLA
— NDTV (@ndtv) October 28, 2022
An IndiGo aircraft was grounded at Delhi’s Indira Gandhi International Airport after sparks were noticed on the runway as the plane’s engine reportedly caught fire. The incident has prompted a probe by the Directorate General of Civil Aviation (DGCA) with the aviation regulator saying that suitable follow-up action would be taken.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm