ಬ್ರೇಕಿಂಗ್ ನ್ಯೂಸ್
29-10-22 07:37 pm HK News Desk ದೇಶ - ವಿದೇಶ
ಮುಂಬೈ, ಅ.29 : ಗುಜರಾತಿನ ಗಾಂಧಿ ನಗರದಿಂದ ಮುಂಬೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶನಿವಾರ ಮತ್ತೆ ಅಪಘಾತಕ್ಕೀಡಾಗಿದೆ. ಎಕ್ಸ್‌ಪ್ರೆಸ್ ರೈಲು ಗುಜರಾತಿನ ಅತುಲ್ ಎಂಬಲ್ಲಿ ಗೂಳಿಯೊಂದಕ್ಕೆ ಡಿಕ್ಕಿಯಾಗಿದ್ದು ಒಂದೇ ತಿಂಗಳಲ್ಲಿ ಮೂರನೇ ಬಾರಿ ಅಪಘಾತಕ್ಕೀಡಾಗಿದೆ.
ಗೂಳಿಗೆ ಡಿಕ್ಕಿಯಾಗಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದ್ದು 15 ನಿಮಿಷ ತಡವಾಗಿ ಮುಂಬೈ ಸೆಂಟ್ರಲ್ ನಿಲ್ದಾಣವನ್ನು ತಲುಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ. ಗೂಳಿ ಸತ್ತಿದೆ ಎಂದು ಪಶ್ಚಿಮ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಒಂದೇ ತಿಂಗಳಲ್ಲಿ ಮೂರು ಬಾರಿ ಅಪಘಾತಕ್ಕೀಡಾಗಿರುವುದು ವಿಶೇಷ. ಮೂರು ಬಾರಿಯೂ ಜಾನುವಾರುಗಳಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅ.6ರಂದು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು. ಇದೇ ರೈಲು ಅ.7ರಂದು ಹಸುವಿಗೆ ಗುದ್ದಿತ್ತು. ಹೀಗಾಗಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿತ್ತು. ಆನಂತರ ರೈಲಿನ ಮುಂಭಾಗವನ್ನು ದುರಸ್ತಿ ಮಾಡಿ, ರೈಲಿಗೆ ಮರಳಿ ಚಾಲನೆ ನೀಡಲಾಗಿತ್ತು. ದುರಸ್ತಿಯಾದ ಕೆಲ ದಿನಗಳ ಬಳಿಕ ಈ ಅತ್ಯಾಧುನಿಕ ರೈಲಿಗೆ ಮತ್ತೊಮ್ಮೆ ಅಪಘಾತವಾಗಿದೆ.
'ವಂದೇ ಭಾರತ್' ಸರಣಿ ಅಡಿಯಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿ, ತಯಾರಿಸಲಾದ ಸೆಮಿ- ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30ರಂದು ಚಾಲನೆ ನೀಡಿದ್ದರು. ಮೊದಲ ಬಾರಿಗೆ ಗುಜರಾತಿನ ಗಾಂಧಿ ನಗರದಿಂದ ಮುಂಬೈ ನಡುವೆ ಪ್ರಯಾಣ ಆರಂಭಿಸಿದೆ.
The Mumbai-Gandhinagar Vande Bharat Superfast Express train rammed into cattle near Atul station in Gujarat on Saturday (October 29) morning, causing a delay of 15-20 minutes in reaching its destination, a railway official said.Railway sources said the incident left the train's front panel damaged and also dented the underbelly equipment of its first coach.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
08-10-26 12:06 pm
HK News Staffer
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
08-10-26 11:08 am
HK News Staffer
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am
ಮೂಡುಶೆಡ್ಡೆ ವ್ಯಾಪ್ತಿಯಲ್ಲಿ 68 ಮತ ಅಳಿಸಿಹಾಕಲು ಅರ್...
07-10-26 04:45 pm
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm