ಬ್ರೇಕಿಂಗ್ ನ್ಯೂಸ್
12-10-20 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ಖ್ಯಾತ ನಟಿ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬು ಸುಂದರ್ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದ ಖುಷ್ಬೂ ಸುಂದರ್, ರಾಷ್ಟ್ರೀಯ ವಕ್ತಾರೆ ಹುದ್ದೆಯಲ್ಲಿದ್ದರು. ಇದೀಗ ಖುಷ್ಬು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ರಾಜಿನಾಮೆ ಪತ್ರ ಬರೆದಿದ್ದು ಪಕ್ಷ ತ್ಯಜಿಸುವುದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಕೆಲವು ವ್ಯಕ್ತಿಗಳ ಕಾರಣದಿಂದ ನಿಸ್ತೇಜನಾಗಿದ್ದೆ. ತಳಮಟ್ಟದಲ್ಲಿ ಕಾರ್ಯಕರ್ತರ ಜೊತೆಗೆ ಸಂಪರ್ಕ ರಹಿತರು, ಸಾರ್ವಜನಿಕ ಜೀವನದಲ್ಲಿ ಇಲ್ಲದೆ ಉನ್ನತ ಸ್ಥಾನದಲ್ಲಿರುವ ಮಂದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ. ಸುದೀರ್ಘ ಕಾಲದ ಯೋಚನೆಯ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖುಷ್ಬು ಬಿಜೆಪಿ ಸೇರಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಲೋಕಸಭಾ ಚುನಾವಣೆಗೆ ಸೀಟು ಸಿಗದ ಬೇಸರವೂ ಖುಷ್ಬುಗೆ ಇತ್ತು. ಬಿಜೆಪಿಯಿಂದ ಮುಂದಿನ ವರ್ಷದ ಚುನಾವಣೆಯಲ್ಲಿ ಟಿಕೆಟ್ ನೀಡುವ ಭರವಸೆ ನೀಡಿದೆ. ಇದೇ ವೇಳೆ, ರಾಷ್ಟ್ರೀಯ ವಕ್ತಾರ ಹುದ್ದೆಯಿಂದ ಖುಷ್ಬು ಅವರನ್ನು ಕಾಂಗ್ರೆಸ್ ಪಕ್ಷ ತೆಗೆದುಹಾಕಿದೆ. ಕಳೆದ ಆರು ತಿಂಗಳಲ್ಲಿ ಖುಷ್ಬು ಪಕ್ಷದ ನಂಬಿಕೆ ಮತ್ತು ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇತ್ತೀಚೆಗೆ ರಾಹುಲ್ ಗಾಂಧಿ ಕುರಿತಾಗಿಯೂ ವಿರೋಧಿಸಿ ಟ್ವೀಟ್ ಮಾಡಿ ವಿವಾದ ಎಳೆದುಕೊಂಡಿದ್ದರು. ಜನರು ಆಕೆಯನ್ನು ನಟಿಯಾಗಿ ನೋಡುತ್ತಾರೆ ವಿನಾ ರಾಜಕಾರಣಿಯಂತಲ್ಲ. ಅವರು ಪಕ್ಷ ಬಿಟ್ಟಿದ್ದರಿಂದ ಪಕ್ಷಕ್ಕೆ ಏನೂ ನಷ್ಟವಿಲ್ಲ ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್ ಅಳಗಿರಿ ಹೇಳಿದ್ದಾರೆ.
Congress national spokesperson Kushboo Sundar on Monday offered her resignation from the party and joined BJP in the presence of Tamil Nadu State BJP President L. Murugan and BJP National General Secretary C.T. Ravi.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm