ಬ್ರೇಕಿಂಗ್ ನ್ಯೂಸ್
12-10-20 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ದೇಶದ ಗಡಿ ರಕ್ಷಣೆ ಹಾಗೂ ಸೇನೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ 7 ರಾಜ್ಯ ಪ್ರದೇಶಕ್ಕೆ ಸೇನಾ ಸಾರಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿ ರಸ್ತೆಗಳ ಸಂಸ್ಥೆ(ಬಾರ್ಡರ್ ರೋಡ್ಸ್ ಆರ್ಗನೈಷೇಶನ್) ನಿರ್ಮಿಸಿದ 44 ಸೇತುವೆಗಳನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 44 ಸೇತುವೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.
ಕೋವಿಡ್ 19 ಸೋಂಕಿನಿಂದಾಗಿ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೋರಿರುವ ಸಮಯದಲ್ಲಿ ಪಾಕಿಸ್ತಾನ ಮತ್ತು ಚೀನಾ ಉಭಯ ದೇಶಗಳ ಜತೆ ಹಂಚಿಕೊಂಡಿರುವ ಏಳು ಸಾವಿರ ಕಿಲೋ ಮೀಟರ್ ಗಳಷ್ಟು ಉದ್ದದ ಗಡಿ ಪ್ರದೇಶದಲ್ಲಿ ವಿವಾದ ಹುಟ್ಟುಹಾಕಿರುವುದಾಗಿ ಕಿಡಿಕಾರಿದರು.
ಪಶ್ಚಿಮ, ಉತ್ತರ ಹಾಗೂ ಈಶಾನ್ಯ ರಾಜ್ಯಗಳ ಪ್ರದೇಶದಿಂದ ಸೇನಾ ಹಾಗೂ ನಾಗರಿಕ ಸಾರಿಗೆಗೆ ಅನುಕೂಲವಾಗುವ ನೆಲೆಯಲ್ಲಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ವರ್ಷವಿಡೀ ಸಾರಿಗೆ ವ್ಯವಸ್ಥೆ ಲಭ್ಯವಿಲ್ಲದ ಪ್ರದೇಶದಲ್ಲಿ ನಮ್ಮ ಯೋಧರನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದೆ ಎಂದು ಸಿಂಗ್ ಹೇಳಿದರು.
ಕೋವಿಡ್ 19 ಸೋಂಕು ಹಾಗೂ ಗಡಿಯಲ್ಲಿ ಸಂಘರ್ಷದ ಸಮಸ್ಯೆಯನ್ನು ಎದುರಿಸುತ್ತಿದ್ದರು ಕೂಡಾ ಭಾರತ ದೃಢಸಂಕಲ್ಪದ ಪ್ರತಿಕ್ರಿಯೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ಮೂಲಭೂತ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.
As many as 44 bridges constructed in border areas of Ladakh, Arunachal Pradesh, Sikkim, Himachal Pradesh, Uttarakhand, Punjab and Jammu and Kashmir were dedicated to the nation by Defence Minister Rajnath Singh on Monday.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm