ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 14 : ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಗೃಹ ಬಂಧನಕ್ಕೆ ಗುರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬರೊಬ್ಬರಿ 14 ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಈ ಮೂಲಕ ಕಣಿವೆಯ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಗೃಹ ಬಂಧನದಿಂದ ಮುಕ್ತಿ ಪಡೆದಂತಾಗಿದೆ.
2019ರ ಆಗಸ್ಟ್ 5ರಂದು ಕೇಂದ್ರ ಸರ್ಕಾರ ಆರ್ಟಿಕಲ್ 370 ತೆಗೆಯುವ ನಿರ್ಧಾರ ಕೈಗೊಂಡ ಸಂದರ್ಭದಲ್ಲಿ ಮುಫ್ತಿ ಅವರನ್ನ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಈ ವರ್ಷದ ಫೆಬ್ರವರಿ 5ರಂದು ಸಾರ್ವಜನಿಕ ಸುರಕ್ಷತೆ ಕಾಯ್ದೆ ಪಿಎಸ್ಎ ಅಡಿಯಲ್ಲಿ ಅವರ ಬಂಧನದ ಅವಧಿಯನ್ನು ಮುಂದುವರಿಸಲಾಗಿತ್ತು. ಅವರ ಬಂಧನ ಅವಧಿಯನ್ನು ಇದುವರೆಗೂ ವಿಸ್ತರಿಸುತ್ತಾ ಬರಲಾಗಿತ್ತು. ಮೆಹಬೂಬ ಅವರ ಮಗಳು ಇಲ್ತಿಜಾ ಮುಫ್ತಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮೆಹಬೂಬ ಮುಫ್ತಿ ಬಿಡುಗಡೆಗೆ ಗಡುವು ನಿಗದಿಪಡಿಸಿತ್ತು.
ಇನ್ನು ಬಿಡುಗಡೆಯಾಗುತ್ತಿದ್ದಂತೆ ಕಪ್ಪು ಆಡಿಯೋ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮೆಹಬೂಬಾ ಕಿಡಿ ಕಾರಿದ್ದು, ಟ್ವಿಟರ್ನಲ್ಲಿಯೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿ, ಒಂದೂ ವರ್ಷಕ್ಕೂ ಹೆಚ್ಚು ಕಾಲ ಅಂದರೆ 14 ತಿಂಗಳ ಬಳಿಕ ಬಿಡುಗಡೆ ಹೊಂದಿದ್ದೇನೆ. 370ನೇ ವಿಧಿ ರದ್ದುಗೊಳಿಸಿದ ಕೇಂದ್ರದ ಕ್ರೂರ ನಿರ್ಧಾರದ ಬಗ್ಗೆ ನಾನು ಯಾವಾಗಲೂ ಯೋಚಿಸುತ್ತಿದ್ದೇನೆ. ಸರ್ಕಾರ ವಿಶೇಷ ಸ್ಥಾನಮಾನವನ್ನು ಮರಳಿಸಬೇಕು ಹಾಗೂ ದೇಶದ ಹಲವು ಭಾಗಗಳಲ್ಲಿ ಜೈಲಿನಲ್ಲಿ ಬಳಲುತ್ತಿರುವವರನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಆದರೆ ನಾವೆಲ್ಲರೂ ಹೋರಾಡಬೇಕಿದೆ ಎಂದಿದ್ದಾರೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm