ಬ್ರೇಕಿಂಗ್ ನ್ಯೂಸ್
14-10-20 12:40 pm Headline Karnataka News Network ದೇಶ - ವಿದೇಶ
ಚೆನ್ನೈ , ಅಕ್ಟೋಬರ್ .14: ತಮಿಳು ಸ್ಟಾರ್ ನಟ ಧನುಷ್ ಹಾಗೂ ಹಿರಿಯ ನಟ, ರಾಜಕಾರಣಿ ವಿಜಯಕಾಂತ್ ನಿವಾಸಕ್ಕೆ ಕಿಡಿಗೇಡಿಗಳು ಬಾಂಬ್ ಹಾಕುವ ಬೆದರಿಕೆ ಒಡ್ಡಿದ್ದಾರೆ.
ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಇಬ್ಬರ ಮನೆಗಳಿಗೂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಮನೆಯಲ್ಲಿ ಸಂಶಯಿತ ವಸ್ತು ಯಾವುದೂ ಸಿಗಲಿಲ್ಲ. ಹೀಗಾಗಿ ಇದೊಂದು ಸುಳ್ಳು ಬೆದರಿಕೆ ಆಗಿರಬಹುದು ಎನ್ನಲಾಗುತ್ತಿದೆ.
ನಟ ಧನುಷ್ ಅವರ ಚೆನ್ನೈನಲ್ಲಿರುವ ಅಭಿರಾಮಪುರಂ ನಿವಾಸ ಹಾಗೂ ವಿಜಯಕಾಂತ್ ಅವರ ವಿರುಗಂಬಕ್ಕಂನ ಮನೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಬಂದಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು, ಇಬ್ಬರ ನಿವಾಸಗಳಿಗೂ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಈ ಕರೆ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬಳಿಕ ಎರಡೂ ಕರೆಗಳನ್ನು ಒಬ್ಬನೇ ಮಾಡಿರುವುದಾಗಿ ತಿಳಿದುಬಂದಿದೆ. ಘಟನೆಯ ಬಳಿಕ ವ್ಯಕ್ತಿಯ ಬಗ್ಗೆ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆತನ ಬಗ್ಗೆ ಮಾಹಿತಿ ಗೊತ್ತಾಗಿದ್ದು ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಎರಡು ತಿಂಗಳಿಂದ ಕಾಲಿವುಡ್ ನಟರಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿದೆ. ಈ ಮೊದಲು ರಜನಿಕಾಂತ್, ವಿಜಯ್ ಮತ್ತು ಸೂರ್ಯ ಅವರಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಆದರೆ ಈ ಕರೆಗಳನ್ನು ಮಾನಸಿಕ ಅಸ್ವಸ್ಥ ವ್ಯಕ್ತಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಜುಲೈ 18ರಂದು ನಟ ಅಜಿತ್ ಮನೆಯಲ್ಲಿ ಬಾಂಬ್ ಇರುವ ಬಗ್ಗೆ ಕರೆ ಬಂದಿತ್ತು. ಬಳಿಕ ಬಾಂಬ್ ಸ್ಕ್ವಾಡ್ ಅಧಿಕಾರಿಗಳು ಇಡೀ ಮನೆಯನ್ನು ಜಾಲಾಡಿದ್ದರೂ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಇದು ಸುಳ್ಳು ಕರೆ ಎಂದಿದ್ದರು.
Bomb threats were issued to Tamil stars Dhanush and Vijayakanth's residences in Chennai. The police officials immediately searched their houses and found it be a hoax.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm