ಬ್ರೇಕಿಂಗ್ ನ್ಯೂಸ್
01-02-23 07:41 pm HK News Desk ದೇಶ - ವಿದೇಶ
ನವದೆಹಲಿ, ಫೆ.1: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದರು. ಬಜೆಟ್ ಮುಖ್ಯಾಂಶಗಳು ಇಂತಿವೆ.
ಯಾವ ಇಲಾಖೆಗೆ ಎಷ್ಟು ಅನುದಾನ?
ಸಿಬಿಐಗೆ 946 ಕೋಟಿ ;
ಕೇಂದ್ರ ಸರ್ಕಾರ 2023–24ನೇ ಸಾಲಿನ ಬಜೆಟ್ನಲ್ಲಿ ಕೇಂದ್ರ ತನಿಖಾ ದಳಕ್ಕೆ(ಸಿಬಿಐ) ₹946 ಕೋಟಿ ನೀಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅನುದಾನ ಶೇಕಡ 4.4ರಷ್ಟು ಹೆಚ್ಚಾಗಿದೆ. ದೇಶದ ಅತ್ಯುನ್ನತ ತನಿಖಾ ಸಂಸ್ಥೆ ವಿವಿಧ ರಾಜ್ಯಗಳು, ಹೈಕೋರ್ಟ್ಗಳು ಮತ್ತು ಸುಪ್ರೀಂ ಕೋರ್ಟ್ನಿಂದ ಹಸ್ತಾಂತರಿಸಲ್ಪಟ್ಟ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ದೇಶದಲ್ಲಿನ ಬಹುತೇಕ ಅಪರಾಧ ಮತ್ತು ವಂಚನೆ ಪ್ರಕರಣಗಳನ್ನು ಕೈಗೆತ್ತಿಕೊಳ್ಳುತ್ತದೆ. ಈ ನಿಟ್ಟಿನಲ್ಲಿ ತನ್ನ ಮಾನವಸಂಪನ್ಮೂಲವನ್ನು ಸಾಕಷ್ಟು ವಿಸ್ತರಿಸಿಕೊಂಡಿದೆ. 2022–23ರ ಬಜೆಟ್ನಲ್ಲಿ ಸಂಸ್ಥೆಗೆ 841.9 ಕೋಟಿ ಲಭಿಸಿತು.
ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ 2023-24ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ರಕ್ಷಣಾ ವಲಯಕ್ಕೆ ₹5.94 ಲಕ್ಷ ಕೋಟಿ ಮೀಸಲಿಡಲಾಗಿದೆ. ಕಳೆದ ಬಾರಿ ರಕ್ಷಣಾ ವಲಯಕ್ಕೆ ₹5.25 ಕೋಟಿ ಮೀಸಲಿಡಲಾಗಿತ್ತು.
* 7 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ಇಲ್ಲ;
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಕೇಂದ್ರ ಬಜೆಟ್ನಲ್ಲಿ ಪರಿಷ್ಕರಿಸಲಾಗಿದ್ದು, ಹೊಸ ತೆರಿಗೆ ಪದ್ಧತಿಯಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂಪಾಯಿಯಿಂದ 7 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಹೀಗಾಗಿ, 7.ಲಕ್ಷದವರೆಗೆ ಆದಾಯವುಳ್ಳವರಿಗೆ ಯಾವುದೇ ತೆರಿಗೆ ಇರುವುದಿಲ್ಲ.
ಹಳೆ ತೆರಿಗೆ ಪದ್ಧತಿಯಲ್ಲಿ ತೆರಿಗೆ ವಿನಾಯಿತಿ ಮಿತಿಯನ್ನು 2.5 ಲಕ್ಷ ರೂಪಾಯಿಯಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ. 3 ಲಕ್ಷದಿಂದ 6 ಲಕ್ಷದವರಗೆ ಶೇಕಡ 5ರಷ್ಟು, 6 ರಿಂದ 9 ಲಕ್ಷದವರೆಗೆ ಶೇಕಡ10 ರಷ್ಟು, 9 ಲಕ್ಷದಿಂದ 12 ಲಕ್ಷದವರೆಗೆ ಶೇಕಡ 15ರಷ್ಟು ತೆರಿಗೆ ವಿಧಿಸಲಾಗುತ್ತದೆ.
* ಬೆಲೆ ಏರಿಕೆಯಾದ ಸರಕುಗಳ ವಿವರ; ಸಿಗರೇಟ್, ಎಲೆಕ್ಟ್ರಿಕ್ ಚಿಮಣಿ, ಆಮದು ಮಾಡಿಕೊಂಡ ರಬ್ಬರ್, ಚಿನ್ನ, ಬೆಳ್ಳಿ, ಬ್ರಾಂಡೆಡ್ ಬಟ್ಟೆಗಳು, ಪ್ಲಾಟಿನಮ್, ವಜ್ರ, ಎಕ್ಸ್ರೇ, ಹೆಡ್ಫೋನ್, ಇಯರ್ ಫೋನ್, ವೈದ್ಯಕೀಯ ಉತ್ಪನ್ನಗಳು ದುಬಾರಿಯಾಗಲಿವೆ.
* ಬೆಲೆ ಕಡಿಮೆಯಾದ ಸರಕುಗಳ ವಿವರ; ಮೊಬೈಲ್ ಫೋನ್, ಲ್ಯಾಪ್ಟಾಪ್, ಸೈಕಲ್, ಎಲ್ಇಡಿ ಟಿವಿ, ಟಿವಿ ಪ್ಯಾನಲ್, ಆಟೊಮೊಬೈಲ್, ಜವಳಿ, ಎಲೆಕ್ಟ್ರಿಕ್ ವಾಹನ, ಕ್ಯಾಮೆರಾ ಲೆನ್ಸ್, ಜೈವಿಕ ಅನಿಲ ಆಧಾರಿತ ಉತ್ಪನ್ನಗಳು
* ಕೃಷಿ ವೇಗವರ್ಧಕ ನಿಧಿ ಸ್ಥಾಪನೆ;
ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್ಅಪ್ಗಳನ್ನು ಆರಂಭಿಸಲು ಉತ್ತೇಜಕ ಕ್ರಮವಾಗಿ ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು. ರಾಜ್ಯಗಳ ಸಕ್ರಿಯ ಭಾಗವಹಿಸುವಿಕೆ, ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಪ್ರವಾಸೋದ್ಯಮಕ್ಕೆ ಉತ್ತೇನ ನೀಡಲಾಗುವುದು.
* ಸೂಕ್ಷ್ಮ ನೀರಾವರಿ ಪ್ರೋತ್ಸಾಹಿಸಲು ಭದ್ರಾ ಮೇಲ್ದಂಡೆಗೆ ₹5,300 ಕೋಟಿ;
ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಸೂಕ್ಷ್ಮ ನೀರಾವರಿ ಒದಗಿಸುವ ಗುರಿಯನ್ನು ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ಕೇಂದ್ರ ನೆರವು ನೀಡಲಾಗುವುದು.
* 157 ಹೊಸ ನರ್ಸಿಂಗ್ ಕಾಲೇಜು;
2014ರ ನಂತರ ಆರಂಭವಾಗಿರುವ 157 ವೈದ್ಯಕೀಯ ಕಾಲೇಜುಗಳಲ್ಲಿ 157 ಹೊಸ ನರ್ಸಿಂಗ್ ಕಾಲೇಜು ಆರಂಭಿಸಲಾಗುವುದು.
* ಪ್ರಧಾನ ಮಂತ್ರಿ ಆವಾಸ್ ಯೋಜನೆ ಶೇಕಡ 66ರಷ್ಟು ವಿಸ್ತರಿಸಲಾಗಿದ್ದು, ಅನುದಾನ ₹79,000 ಕೋಟಿಗೆ ಹೆಚ್ಚಿಸಲಾಗಿದೆ
* ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 38,800 ಶಿಕ್ಷಕರ ನೇಮಕ
3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಕೇಂದ್ರ ಸರ್ಕಾರವು ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ.
* ಶೇ 7.5 ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಮಾಡಲು ಮಹಿಳಾ ಸಮ್ಮಾನ್ ಅಡಿ ಅವಕಾಶ
ಶೇ 7.5 ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ.ವರೆಗೆ ಠೇವಣಿ ಇಡಲು ‘ಮಹಿಳಾ ಸಮ್ಮಾನ್’ ಉಳಿತಾಯ ಪ್ರಮಾಣಪತ್ರದ ಅಡಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ. ಇದನ್ನು 2025ರ ವರೆಗೆ ವಿಸ್ತರಿಸಲಾಗುತ್ತದೆ.
* ಒಂದು ಜಿಲ್ಲೆ, ಒಂದು ಉತ್ಪನ್ನಕ್ಕೆ ಪ್ರೋತ್ಸಾಹ
'ಒಂದು ಜಿಲ್ಲೆ ಒಂದು ಉತ್ಪನ್ನ' ವಸ್ತುಗಳು ಮತ್ತು ಜಿಐ ಉತ್ಪನ್ನಗಳ ಪ್ರಚಾರ ಮತ್ತು ಮಾರಾಟಕ್ಕಾಗಿ ಯೂನಿಟಿ ಮಾಲ್ ಸ್ಥಾಪಿಸಲು ರಾಜ್ಯ ಸರ್ಕಾರಗಳಿಗೆ ಉತ್ತೇಜನ ನೀಡಲಾಗುತ್ತದೆ.
* ಯುವಕರ ಕೌಶಲ್ಯ ತರಬೇತಿಗಾಗಿ ‘ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ 4.0’ ಅನ್ನು ಪ್ರಾರಂಭಿಸಲಾಗುವುದು
* ಪ್ರವಾಸೋದ್ಯಮವನ್ನು ಉತ್ತೇಜಿಸಲು 'ಚಾಲೆಂಜ್ ಮೋಡ್' ಮೂಲಕ 50 ಸ್ಥಳಗಳನ್ನು ಆಯ್ಕೆ ಮಾಡಲು ಸರ್ಕಾರ ನಿರ್ಧರಿಸಿದೆ.
Union Finance Minister Nirmala Sitharaman on Wednesday presented the Union Budget 2023, the fifth budget of Modi 2.0. In the last full-fledged Budget before the general elections next year, Nirmala Sitharaman said that the Indian economy is on the right path and heading towards a bright future. In a big boost for taxpayers and economy, Sitharaman announced major changes in tax slabs under the new tax regime and big hike in allocation for railways and capital expenditure.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm