ಬ್ರೇಕಿಂಗ್ ನ್ಯೂಸ್
28-02-23 03:46 pm HK News Desk ದೇಶ - ವಿದೇಶ
ಮುಂಬೈ, ಫೆ.28 : ಪಾಕಿಸ್ತಾನ, ಚೀನಾ ಮತ್ತು ಹಾಂಕಾಂಗ್ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದಾನೆ ಎನ್ನಲಾಗುತ್ತಿದೆ. ಈ ಬಗ್ಗೆ ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ.
ಡೇಂಜರಸ್ ವ್ಯಕ್ತಿಯನ್ನು ಮಧ್ಯಪ್ರದೇಶದ ಇಂದೋರ್ ಮೂಲದ ಸರ್ಫರಾಜ್ ಮೆಮನ್ ಎಂದು ಎನ್ಐಎ ಗುರುತಿಸಿದೆ. ಈತ ಈಗಾಗಲೇ ಮುಂಬೈ ಪ್ರವೇಶ ಮಾಡಿದ್ದಾನೆ. ಉಗ್ರ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಇ-ಮೇಲ್ನಲ್ಲಿ ಎಚ್ಚರಿಕೆ ನೀಡಿದೆ. ಜೊತೆಗೆ ಆತನ ಆಧಾರ್ ಮಾಹಿತಿ, ವಾಹನ ಚಾಲನಾ ಪರವಾನಗಿ, ಪಾಸ್ಪೋರ್ಟ್ ಮತ್ತಿತರ ಮಾಹಿತಿಗಳನ್ನ ಎನ್ಐಎ ಮುಂಬೈ ಪೊಲೀಸರಿಗೆ ರವಾನಿಸಿದೆ.
ಮುಂಬೈ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದು, ಮಧ್ಯಪ್ರದೇಶದ ಇಂದೋರ್ ಪೊಲೀಸರಿಗೂ ಈ ಬಗೆಗಿನ ಮಾಹಿತಿ ರವಾನಿಸಿದೆ. ಕಳೆದ ಶನಿವಾರವಷ್ಟೇ ಮಹಾರಾಷ್ಟ್ರ ಮೂಲದ ಖಾಲಿದ್ ಮುಬಾರಕ್ (21) ಮತ್ತು ತಮಿಳುನಾಡು ಮೂಲದ ಅಬ್ದುಲ್ಲಾ (26) ಎಂಬಿಬ್ಬರು ಶಸ್ತ್ರಾಸ್ತ್ರ ತರಬೇತಿ ಪಡೆಯಲು ಪಾಕಿಸ್ತಾನಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ದೆಹಲಿ ಪೊಲೀಸರ ವಿಶೇಷ ಪಡೆ ಬಂಧಿಸಿತ್ತು. ಇದರ ಬೆನ್ನಲ್ಲೇ ಡೇಂಜರಸ್ ವ್ಯಕ್ತಿಯ ಸುಳಿವು ಆತಂಕ ಮೂಡಿಸಿದೆ.
ಶನಿವಾರ ದೆಹಲಿಯಲ್ಲಿ ಸಿಕ್ಕಿಬಿದ್ದ ಇಬ್ಬರೂ ವ್ಯಕ್ತಿಗಳು ಅಕ್ರಮವಾಗಿ ಗಡಿದಾಟುವ ಮೂಲಕ ಪಾಕಿಸ್ತಾನಕ್ಕೆ ತೆರಳಿ ಅಲ್ಲಿ ಶಸ್ತ್ರಾಸ್ತ್ರ ಬಳಕೆ ತರಬೇತಿ ಪಡೆಯಲು ನಿರ್ಧರಿಸಿದ್ದರು. ಫೆಬ್ರವರಿ 14ರಂದೇ ಪಾಕ್ ಮೂಲದ ಹ್ಯಾಂಡ್ಲರ್ ಸಹಾಯದಿಂದ ಭಯೋತ್ಪಾದನಾ ಘಟಕದ ಬಗ್ಗೆ ನಿಷ್ಠೆ ಹೊಂದಿರುವ ಕೆಲ ಉಗ್ರಗಾಮಿಗಳು ಪಾಕ್ಗೆ ತೆರಳಲು ಸಂಚು ರೂಪಿಸಿದ್ದ ವೇಳೆ ಇಬ್ಬರೂ ಸಿಕ್ಕಿಬಿದ್ದಿದ್ದರು. ಈ ವೇಳೆ ಅವರಿಂದ 2 ಪಿಸ್ತೂಲ್, 10 ಸಜೀವ ಗುಂಡು, ಚಾಕು, ವೈರ್ ಕಟರ್ ವಶಪಡಿಸಿಕೊಳ್ಳಲಾಗಿತ್ತು.
The National Investigation Agency (NIA) has informed Mumbai Police to be alert via email, saying that a dangerous man has entered the financial capital of the country. The investigating agency has been on alert since it received this input.The NIA mentions the word "dangerous" in its email asking Mumbai Police to be alert. In its email, the NIA mentioned the name of the suspect as Sarfaraz Memon and said that he has reached Mumbai, sources told
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm