ಬ್ರೇಕಿಂಗ್ ನ್ಯೂಸ್
24-03-23 03:18 pm HK News Desk ದೇಶ - ವಿದೇಶ
ನವದೆಹಲಿ, ಮಾ.24 : ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಗುಜರಾತಿನ ಸೂರತ್ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರಾಹುಲ್ ಗಾಂಧಿಗೆ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆ ಜಾರಿಗೊಳಿಸಿತ್ತು. ಮಾ.23ರಂದು ತೀರ್ಪು ನೀಡಿದ್ದು ಜನಪ್ರತಿನಿಧಿ ಕಾಯ್ದೆ ಪ್ರಕಾರ ಯಾವುದೇ ಜನಪ್ರತಿನಿಧಿ ಎರಡು ವರ್ಷ ಅಥವಾ ಅದಕ್ಕೂ ಮೇಲ್ಪಟ್ಟು ಶಿಕ್ಷೆಗೊಳಗಾದರೆ ಆತ ಅನರ್ಹನಾಗುತ್ತಾನೆ. ಕಾಯ್ದೆಯಡಿ ಕೇರಳದ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸಂಸದ ರಾಹುಲ್ ಗಾಂಧಿ ಅವರನ್ನು ತಕ್ಷಣದಿಂದಲೇ ಅನರ್ಹಗೊಳಿಸಿ ಲೋಕಸಭೆ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ದೇಶ ಬಿಟ್ಟು ಹೋಗಿರುವ ನೀರವ್ ಮೋದಿ, ಲಲಿತ್ ಮೋದಿ ಅವರನ್ನು ಉದ್ದೇಶಿಸಿ, ಎಲ್ಲ ಕಳ್ಳರ ಸರ್ ನೇಮ್ ಮೋದಿ ಎಂದೇ ಆಗಿರುವುದೇಕೆ ಎಂದು ಪ್ರಶ್ನಿಸಿದ್ದರು. ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ಅಣಕಿಸಲು ರಾಹುಲ್ ಗಾಂಧಿ ಈ ಪದ ಬಳಸಿದ್ದರು. ಈ ಬಗ್ಗೆ ಗುಜರಾತಿನ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ, ರಾಹುಲ್ ಗಾಂಧಿ ವಿರುದ್ಧ ಮೋದಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆಂದು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಸೂರತ್ ಕೋರ್ಟಿನಲ್ಲಿ ವಿಚಾರಣೆ ನಡೆದು ನಿನ್ನೆಯಷ್ಟೇ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದರು.
In a huge setback for the Congress party, its former president Rahul Gandhi has been disqualified from the Lok Sabha because of his conviction in a 2019 criminal defamation case. The Lok Sabha Secretariat also declared his constituency vacant. The Election Commission can now announce a special election for the seat.
07-10-26 10:45 pm
HK News Staffer
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
milk price, bus fare: ರಾಜ್ಯದ ಜನತೆಗೆ ಡಬಲ್ ಶಾಕ...
06-10-26 06:17 pm
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
07-10-26 01:10 pm
HK News Staffer
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
07-10-26 02:39 pm
HK News Staffer
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
Brijesh Chowta, Mp Mangalore: ಎಸ್ಐಆರ್ ಬಗ್ಗೆ ಕ...
06-10-26 09:21 pm
Sudhir Kumar Murolli: ಎಸ್ಐಆರ್ ಹೆಸರಲ್ಲಿ ನಿರ್ದಿ...
06-10-26 09:15 pm
ಎಸ್ಐಆರ್ ಫಾರಂ 7 ದುರುಪಯೋಗ ; ಅಲ್ಪಸಂಖ್ಯಾತ ಮತದಾರರ...
05-10-26 10:53 pm
07-10-26 04:45 pm
HK News Staffer
Areca Nut Seized: ಅಸ್ಸಾಂ ಕಡೆಯಿಂದ ಕರ್ನಾಟಕ, ತಮಿ...
07-10-26 11:12 am
chickmanglore crime: ಚಿಕ್ಕಮಗಳೂರಿನಲ್ಲಿ ಭೀಕರ ದು...
06-10-26 05:36 pm
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm